Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಅವರಿಗೆ ಸರ್ಕಾರದಿಂದ ಪ್ರಶಂಸನಾ ಪತ್ರ


ರಾಯಚೂರು ಜುಲೈ 02 : ರಾಯಚೂರ ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರಿಗೆ ಸರಕಾರದಿಂದ ಪ್ರಶಂಸನಾ ಪತ್ರ ಲಭಿಸಿದೆ.
ಕಳೆದ ಮೇ 14ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರಾಯಚೂರ ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ (ಎಸ್‌ಎಚ್ಸಿ) ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‌ಕೆವಿವೈ), ಮನರೇಗಾ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹೀಗೆ ನಾನಾ ಯೋಜನೆಗಳ ಅನುಷ್ಠಾನದಲ್ಲಿ ಗಣನೀಯ ಪ್ರಗತಿ ಸಾಧಿಸಿರುವುದನ್ನು ಮುಖ್ಯಮಂತ್ರಿಗಳು ಗಮನಿಸಿ, ಸಂಬAಧಿಸಿದ ಸಾಧನೆ ಮಾಡಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲು ತಿಳಿಸಿದ್ದಾರೆ. ಈ ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲ ಸಿಬ್ಬಂದಿಯ ಅಚಲ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಯೇ ಕಾರಣ. ನಿಮ್ಮ ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ಸಿಗೆ ನಾಂದಿಯಾಗಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಪಂ ಸಿಇಓ ರಾಹುಲ್ ಪಾಂಡ್ವೆ ಅವರಿಗೆ ನೀಡಿದ ಪ್ರಶಂಸನಾ ಪತ್ರದಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ