Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಪುರ: ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮ ಸರ್ಕಾರದ ಯೋಜನೆ ಸದ್ಭಳಕೆ ಮಾಡಿಕೊಳ್ಳಿ -ಎಚ್.ಎ.ರಾಜು

ಚಿತ್ರದುರ್ಗನ.28:

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಹಲವಾರು ಜನಪರ ಯೋಜನೆಗಳನ್ನು ಪರಿಚಯಿಸಿದ್ದು, ಜನಸಾಮಾನ್ಯರು ಈ ಎಲ್ಲಾ ಯೋಜನೆಗಳ ಅನುಕೂಲತೆ ಪಡೆದುಕೊಳ್ಳಬೇಕು ಎಂದು ರಾಂಪುರ ಎಸ್ಪಿಎಸ್ಆರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಎಚ್.ಎ. ರಾಜು ಹೇಳಿದರು.

ಮೊಳಕಾಲ್ಮುರು ತಾಲ್ಲೂಕಿನ ರಾಂಪುರ ಎಸ್ಪಿಎಸ್ಆರ್ ಪದವಿ ಪೂರ್ವ ಕಾಲೇಜಿನಲ್ಲಿ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಗ್ರಾಮೀಣ ಭಾಗಗಳಿಗೆ ತಲುಪಿಸುವ ಅಗತ್ಯವಿದೆ. ಹಳ್ಳಿಗಳ ಜನರು ಕೇಂದ್ರ ಸರ್ಕಾರದ ಕೃಷಿ ಪಿಂಚಣಿ ಹಾಗೂ ವಿಮಾ ಯೋಜನೆಗಳ ಅನುಕೂಲತೆಗಳನ್ನು ಪಡೆಯಬೇಕು. ಆರೋಗ್ಯ ರಕ್ಷಣೆಗಾಗಿ ಪರಿಚಯಿಸುವ ಆಯುಷ್ಮಾನ್ ಭಾರತ್ ಯೋಜನಾ ಅನುಕೂಲವನ್ನು 70 ವರ್ಷದ ವಯೋಮಾನದವರಿಗೂ ವಿಸ್ತರಿಸಲಾಗಿದೆ. ಮಹಿಳೆಯರು ಹಾಗೂ ಮಕ್ಕಳಿಗಾಗಿ ಹಲವಾರು ಉತ್ತಮ ಯೋಜನೆಗಳಿವೆ ಎಂದರು.

ಕೆ.ಪಿ.ಟಿ.ಸಿ.ಎಲ್ ಸಹಾಯಕ ಅಭಿಯಂತರ ಹನುಮಂತ್ ರೆಡ್ಡಿ ಮಾತನಾಡಿ, ಸೂರ್ಯಘರ್ ಯೋಜನೆ ಅಡಿ ಗ್ರಾಮೀಣ ಭಾಗಗಳ ಜನರು ಸೋಲಾರ್ ಅಳವಡಿಸಿ ಉಳಿತಾಯ ಮಾಡಬಹುದು ಅವರು ಹೇಳಿದರು. ರಾಂಪುರ ಪದವಿ ಪೂರ್ವ ಕಾಲೇಜಿನ ಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಡಾ.ತಿಮ್ಮಣ್ಣ ಮಾತನಾಡಿ, ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಗುರುಸಿದ್ದಪ್ಪ ಅವರು ಸಂವಿಧಾನ ಮತ್ತು ರಾಷ್ಟ್ರೀಐ ಏಕತಾ ದಿವಸ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಲಾ ತಂಡದವರಿಂದ ಜಾನಪದ ಗೀತೆಗಳು, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ನಡೆದವು. ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬೋರಯ್ಯ, ಸುಂದರಮೂರ್ತಿ, ಭೀಮಸೇನಾ, ವಿಶಾಲಾಕ್ಷ ಮತ್ತಿತರರು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ