Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಮೂಲ್ಯ ಕೃತಿಗಳ ಮರು ಮುದ್ರಣ: ಸಾರ್ವಜನಿಕರಿಂದ ಅಭಿಪ್ರಾಯಕ್ಕೆ ಆಹ್ವಾನ

ಬಳ್ಳಾರಿ,ಜೂ.03
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಹಿಂದೆ ಪ್ರಕಟಿಸಿ, ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ಕೆಲವು ಅತ್ಯಂತ ಅಮೂಲ್ಯ ಹಾಗೂ ಪ್ರಮುಖ ಸಾಹಿತ್ಯಿಕ ಕೃತಿಗಳನ್ನು ಮರು ಮುದ್ರಣ ಮಾಡಲು ಬೃಹತ್ ಯೋಜನೆಯೊಂದನ್ನು ಸಿದ್ಧಪಡಿಸಿದೆ. ಈ ಮಹತ್ವದ ಯೋಜನೆಗಾಗಿ ಇಲಾಖೆಯು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದೆ.
ಇಲಾಖೆಯು ಮರು ಮುದ್ರಿಸಲಿರುವ ಕೃತಿಗಳ ಆಯ್ಕೆಗೆ ಸಂಬAಧಿಸಿದAತೆ ಕೇವಲ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದೆ, ಸಾರ್ವಜನಿಕರು, ಓದುಗರು ಹಾಗೂ ಸಾಹಿತ್ಯಾಸಕ್ತರ ಪಾಲ್ಗೊಳ್ಳುವಿಕೆಗೆ ಮುಕ್ತ ಅವಕಾಶ ನೀಡಿದೆ. ಸಾಹಿತ್ಯಾಸಕ್ತರಿಂದ ನೇರವಾಗಿ ಕೋರಿಕೆ ಮತ್ತು ಉಪಯುಕ್ತ ಅಭಿಪ್ರಾಯಗಳನ್ನು ಪಡೆದು ಕೃತಿಗಳನ್ನು ಮರು ಮುದ್ರಣ ಮಾಡಲು ನಿರ್ಧರಿಸಲಾಗಿದೆ.
*ಅಭಿಪ್ರಾಯ ಸಲ್ಲಿಸುವುದು ಹೇಗೆ?*
ಯಾವ ಕೃತಿಗಳು ಮರು ಮುದ್ರಣಗೊಳ್ಳಬೇಕು ಎಂಬ ಬಗ್ಗೆ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ತಮ್ಮ ಅನಿಸಿಕೆ, ಸಲಹೆ ಮತ್ತು ಕೋರಿಕೆಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ kannadasiri.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ದಾಖಲಿಸಬಹುದಾಗಿದೆ.
ಸಾರ್ವಜನಿಕರು ತಮ್ಮ ನೆಚ್ಚಿನ ಕೃತಿಗಳ ಮರು ಮುದ್ರಣಕ್ಕಾಗಿ ವೆಬ್‌ಸೈಟ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅಭಿಪ್ರಾಯ ಹಂಚಿಕೊಳ್ಳಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ