Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯ ಗಣರಾಜ್ಯೋತ್ಸವ-2025 ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ



ಬಳ್ಳಾರಿ,ಜ.27



ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್‌ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi : cradle of stone craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/.../vote-your-favourite-tableau-and.../ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ ರಿಸೆಂಡ್.ಓಟಿಪಿ/ಸಬ್‌ಮಿಟ್ಟೆಡ್ ಇದರಲ್ಲಿ ಸಬ್‌ಮಿಟ್ ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿAದ MYGOVPOLL357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ