Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ


ಬಳ್ಳಾರಿ,ಜೂ.28



ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಸಿರುಗುಪ್ಪ ಮತ್ತು ಸಂಡೂರು ಪಟ್ಟಣಗಳಲ್ಲಿ ದಾಳಿ ನಡೆಸಿ 04 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ತಿಳಿಸಿದ್ದಾರೆ.

ಸಿರುಗುಪ್ಪ ಪಟ್ಟಣದ ದೇಶನೂರು ರಸ್ತೆ, ಆದೋನಿ ರಸ್ತೆ, ಬಳ್ಳಾರಿ ರಸ್ತೆ ಮತ್ತು ಸಂಡೂರು ಪಟ್ಟಣದ ಕೂಡ್ಲಿಗಿ ರಸ್ತೆ, ಹೊಸಪೇಟೆ ರಸ್ತೆ ಹಾಗೂ ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಗುಜರಿ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್ ಲೈಲ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿ, ಕಾರ್ಯಾಚರಣೆ ನಡೆಸಲಾಗಿದೆ.

ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಮುಖ್ಯವಾಹಿನಿ ತರಲು ಶಾಲೆಗಳಿಗೆ ಮರು ದಾಖಲಿಸಲಾಗಿದೆ.

ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಸಂಡೂರು ತಹಶೀಲ್ದಾರ ಅನೀಲ್ ಕುಮಾರ್, ಉಪತಹಶೀಲ್ದಾರ ಸಿದ್ದಾರ್ಥ, ಕಂದಾಯ ನಿರೀಕ್ಷಕ ಮಂಜುನಾಥ, ಆರೋಗ್ಯ ನಿರೀಕ್ಷಕ ರಂಗಸ್ವಾಮಿ, ಮುಖ್ಯ ಅಧಿಕಾರಿ ಜಯಣ್ಣ, ಕಾರ್ಮಿಕ ನಿರೀಕ್ಷಕ ಮಂಜುನಾಥ, ಚೈಲ್ಡ್ ಲೈನ್ ಸಿಬ್ಬಂದಿ ಚಂದ್ರಕಲಾ ಮತ್ತು ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಹೊನ್ನೂರಪ್ಪ ಸೇರಿದಂತೆ ಪೋಲಿಸ್ ಇಲಾಖೆ ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ