Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ವಸತಿ ಶಾಲೆ ಪ್ರಾಂಶುಪಾಲ

ಶಿವಮೊಗ್ಗ ಜು, 21ಶಾಲಾ ಪ್ರವೇಶಾತಿ ನೀಡಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಮೇಘರಾಜ.ಸಿ ಎಂಬುವವರು ತಮ್ಮ ಮಗಳು ಕು.ದೀಕ್ಷಾಳನ್ನು ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 7ನೇ ತರಗತಿಗೆ ಸೇರಿಸಲು ಬಯಸಿದ್ದರು. ಈ ವೇಳೆ ಶಾಲೆಯ ಪ್ರಾಂಶುಪಾಲರಾದ ನಾಮದೇವ್ ಅವರು 'ಡ್ರಮ್ ಸೆಟ್' ಕೊಡುವ ನೆಪದಲ್ಲಿ ರೂ.20,000/- ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಲಂಚ ನೀಡಲು ಇಷ್ಟವಿಲ್ಲದ ಮೇಘರಾಜ್ ಅವರು ಜುಲೈ 18 ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರಿನನ್ವಯ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯಿದೆ-2018) ಕಲಂ 7(a) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ದೂರುದಾರರು ಮುಂಗಡವಾಗಿ ರೂ‌10,000/- ಹಣವನ್ನು ನೀಡುವುದಾಗಿ ಒಪ್ಪಿಕೊಂಡಿದ್ದರು. ಅದರಂತೆ ಜುಲೈ 20 ರಂದು ಮಧ್ಯಾಹ್ನ 12.20 ಗಂಟೆಗೆ ಹುಣಸೆಕಟ್ಟೆಯ ವಸತಿ ಶಾಲೆಯ ತಮ್ಮ ಕೊಠಡಿಯಲ್ಲಿ ಪ್ರಾಂಶುಪಾಲ ನಾಮದೇವ್ ಅವರು ದೂರುದಾರರಿಂದ ರೂ.10,000/- ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆಗಿ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಲಂಚದ ಹಣವನ್ನು ಜಪ್ತಿ ಮಾಡಿಕೊಂಡಿದ್ದು, ಆಪಾದಿತ ಅಧಿಕಾರಿಯನ್ನು ಮುಂದಿನ ತನಿಖೆಗಾಗಿ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರುದ್ರೇಶ್.ಕೆ.ಪಿ. ಅವರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲ್ಯಾಮಿನೆ ಯಮಾಲ್.... ವಿಶ್ವ ಫುಟ್ಬಾಲ್ ನ ಹೊಸ ದ್ರುವತಾರೆಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ವಸತಿ ಶಾಲೆ ಪ್ರಾಂಶುಪಾಲಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಬಂಡಿಹಟ್ಟಿ ಹಾಸ್ಟೆಲ್‌ನಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರಕ್ಕೆ ಕರೆ: ನಂದಿನಿಭಾರತ್ ಜೋಡೋ ಯುವ ಸಂಘ'ಗಳನ್ನು ರಚನೆಗೆ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ* - *ಡಾ ಕುಮಾರಹಲುವಾಗಲಿ ಸೀಮಾದಲ್ಲಿ ಅಕ್ರಮ ಮರಳು ದಂಧೆಕೋರರ ಜಾಲಕ್ಕೆ ಗಣಿ ಇಲಾಖೆ ದಾಳಿ: 3000 ಮೆಟ್ರಿಕ್ ಟನ್ ಮರಳು ಜಪ್ತಿಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಶೇ. 90 ರಷ್ಟು ಕಾಣೆಯಾದ ಮಕ್ಕಳ ಪತ್ತೆ ಮಗು ಕಾಣೆಯಾದ ತಕ್ಷಣ ಎಫ್ ಐ ಆರ್ ದಾಖಲಿಸಿ– ಎಸ್ ಪಿರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ; ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಡಿಸಿ ಮತ್ತು ಜಿಪಂ ಸಿಇಒಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನಚ್ಚರಿಕೆ ಕ್ರಮ ವಹಿಸಿ