Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕ ಇಲಾಖೆಯ ಸಹಮತಿ ಬಳಿಕ ಗೌರವಧನ ಪರಿಷ್ಕರಣೆ: ರಹೀಂ ಖಾನ್


-----

ಬೆಳಗಾವಿ ಸುವರ್ಣಸೌಧ ಡಿ.09 : ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನವನ್ನು ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಸ್ಪಷ್ಟನೆ ನೀಡಿದರು.

ಪರಿಷತನಲ್ಲಿ ಡಿ.09ರಂದು ಸದಸ್ಯರಾದ ಸುನೀಲ್ ಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 255ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು,

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧ್ಯಕ್ಷರು. ಉಪಾಧ್ಯಕ್ಷರು, ಸದಸ್ಯರು ಮತ್ತು ಮಹಾನಗರ ಪಾಲಿಕೆಗಳಲ್ಲಿನ ಮೇಯರ್, ಉಪಮೇಯರ್ ಮತ್ತು ಸದಸ್ಯರ ಗೌರವಧನವನ್ನು ಹೆಚ್ಚಳ ಮಾಡುವ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನದ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಗೌರವಧನ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ 20/09/2025ರ ಪತ್ರದನ್ವಯ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರಿಗೆ ಕೋರಲಾಗಿತ್ತು. ಪ್ರಸ್ತುತ, ಪೌರಾಡಳಿತ ನಿರ್ದೇಶನಾಲದ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿರುತ್ತದೆ. ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿ ದೊರೆತ ನಂತರ ಗೌರವಧನ ಪರಿಷ್ಕರಿಸಲು ಅವಕಾಶವಾಗುತ್ತದೆ ಎಂದು ಸಚಿವರು ವಿವರಿಸಿದರು.

*ಸ್ಪಷ್ಟನೆ*: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ಚುನಾಯಿತ ಸದಸ್ಯರಿಗೆ ಉಚಿತ ಬಸ್ ಪಾಸ್, ಪಿಂಚಣಿ ಹಾಗೂ ಟೋಲ್ ಫ್ರೀ ಪಾಸ್ ನೀಡುವ ಪ್ರಸ್ತಾವನೆ ನಗರಾಭಿವೃದ್ಧಿ ಇಲಾಖೆಯ ಪರಿಶೀಲನೆಯಲ್ಲಿ ಇರುವುದಿಲ್ಲ ಎಂದು ಇದೆ ವೇಳೆ ಸಚಿವರು ಸ್ಪಷ್ಟನೆ ನೀಡಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ