Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು ಆಗಸ್ಟ್ 03 : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಆಗಸ್ಟ್ 3ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ದುಗನೂರು ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮೈಲಾರಲಿಂಗೇಶ್ವರ ಗುಡಿ, ಶ್ರೀ ಕಡಬೂರು ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ ಕಾಮಗಾರಿಗಳಿಗೂ ಸಹ ಇದೆ ವೇಳೆ ಶಾಸಕರು ಚಾಲನೆ ನೀಡಿದರು.
ಬಿಚ್ಚಾಲಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಡಿಯಲ್ಲಿ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಗಿಲ್ಲೇಸೂಗುರ ಗ್ರಾಮಕ್ಕೆ ತೆರಳಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಜೊತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮಾರೆಮ್ಮ ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಅದೇ ರೀತಿ ಕೆಕೆರ‍್ಡಿಬಿಯ ಮ್ಯಾಕ್ರೋ ಯೋಜನೆಯಡಿ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಯ 4 ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರು, ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಗ್ರಾಮಗಳ ಹಿರಿಯ ಮುಖಂಡರು, ಸುತ್ತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೆಶನ ಸದಸ್ಯರು, ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ