Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆ-ಪ್ರಗತಿ ಪರಿಶೀಲನೆ ---- ತ್ವರಿತ ಕ್ರಮಕ್ಕೆ ಸಚಿವ ಎಚ್.ಕೆ.ಪಾಟೀಲ ಸೂಚನೆ





ಬೆಳಗಾವಿ, ಜೂನ್ 6 ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಸುಪ್ರಸಿದ್ಧ ಸುಕ್ಷೇತ್ರ ಸವದತ್ತಿ ಎಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.



ಸವದತ್ತಿ ಎಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಶುಕ್ರವಾರ(ಜೂ.6) ಪ್ರವಾಸಿಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ನೂರು ಕೋಟಿ ರೂಪಾಯಿ ವಿಶೇಷ ಅನುದಾನ ಹಾಗೂ ಪ್ರಸಾದ ಯೋಜನೆಯಡಿ ನೀಡಲಾಗಿರುವ 18.37 ಕೋಟಿ ರೂಪಾಯಿ ಅನುದಾನದಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದರು.



ಪ್ರಸಾದ ಯೋಜನೆಯಡಿ ಎರಡು ಬಹುಪಯೋಗಿ ಸಭಾಂಗಣಗಳು, ಶೌಚಾಲಯ, ಸ್ನಾನಗೃಹಗಳು, ಮಾಹಿತಿ ಕೇಂದ್ರಗಳು, ಕ್ಯಾಂಟೀನ್, ಪ್ರಾಥಮಿಕ ಚಿಕಿತ್ಸಾ ಕೇಂದ್ರ, ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಡಿಜಿಟಲ್ ಮಾಹಿತಿ ಫಲಕಗಳ ಅಳವಡಿಕೆ ಕುರಿತು ಚರ್ಚಿಸಿದರು.



ಅದೇ ರೀತಿ ನೂರು ಕೋಟಿ ರೂಪಾಯಿ ವಿಶೇಷ ಸಹಾಯಾನುದಾನ ಯೋಜನೆಯಡಿ ಭಕ್ತರಿಗೆ ಸರದಿ ಕಾಂಪ್ಲೆಕ್ಸ, ಪಾರ್ಕಿಂಗ್ ವ್ಯವಸ್ಥೆ, ಅನ್ಮ ದಾಸೋಹ ಭವನ, ವ್ಯಾಪಾರಿ ಮಳಿಗೆ, ಆಡಳಿತ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು.



ಮಾಸ್ಟರ್ ಪ್ಲ್ಯಾನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸವದತ್ತಿಯಲ್ಲಿ ಜರುಗಿದ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳ ಅನುಸಾರ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.



ಒಟ್ಟಾರೆಯಾಗಿ ದೇವಿ ದರ್ಶನ, ಊಟೋಪಹಾರ, ಪಾರ್ಕಿಂಗ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಭಕ್ತಾಧಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿದರು.



ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು.



ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಶ್ರೀ ರೇಣುಕಾ ಎಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧಿಕಾರಿಗಳಾದ ಗೀತಾ ಕೌಲಗಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಸೌಮ್ಯಾ ಬಾಪಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ