Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಗಣಿತ ವಿಷಯದ ವಿಚಾರ ಸಂಕಿರಣ

ಧಾರವಾಡ () ಡಿಸೆಂಬರ.23: ಕರ್ನಾಟಕ ಸರಕಾರ, ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು (ಡಿ.23) ಗಣಿತ ಕಲಿಕಾ ಆಂದೋಲನದ ಅಂಗವಾಗಿ ಗಣಿತ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತ್ತು.

ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿ ಬಿ. ಎಸ್. ಮೂಗನೂರಮಠ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಗಣಿತ ಸ್ಪರ್ಧೆಯ ಜಿಲ್ಲಾ ವರದಿ ಬಿಡುಗಡೆಗೊಳಿಸಿ, ಗಣಿತ ಕ್ಷೇತ್ರದಲ್ಲಿ ಭಾರತೀಯರು ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ ಮತ್ತು ಗಣಿತ ವಿಷಯದಲ್ಲಿ ಮಕ್ಕಳ ಪ್ರಗತಿಗಾಗಿ ಎಲ್ಲಾ ಭಾಗೀದಾರರ ಜವಾಬ್ದಾರಿಯೊಂದಿಗೆ ಭೌತಿಕ ಸೌಕರ್ಯ ಒದಗಿಸುವಲ್ಲಿ ಶಿಕ್ಷಣಕ್ಕಾಗಿ ಗ್ರಾಮ ಪಂಚಾಯಿತಿಯವರ ಸಹಕಾರ ಮುಖ್ಯವಿರುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಡಯಟ್ ಉಪನಿರ್ದೇಶಕಿ ಜಯಶ್ರೀ ಕಾರೇಕರ ಅವರು ಮಾತನಾಡಿ, ಮಕ್ಕಳ ಹಾಜರಾತಿ ಹಾಗೂ ಕಲಿಕಾ ಪ್ರಗತಿ ಕಾಣಲು ಪಾಲಕರ ಮತ್ತು ಮಕ್ಕಳ ಆಸಕ್ತಿ ತುಂಬಾ ಮುಖ್ಯ, ಮಕ್ಕಳ ಕಲಿಕಾ ಆಸಕ್ತಿಯನ್ನು ಹೆಚ್ಚಿಸಲು ಸರಕಾರದ ಯೋಜನೆಗಳೊಂದಿಗೆ ಸರಕಾರೇತರ ಸಂಸ್ಥೆಗಳ ಸಹಕಾರದಲ್ಲಿ ಮಕ್ಕಳ ಕಲಿಕಾ ಪ್ರಗತಿ ಸಾಧಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಅಕ್ಷರ ಫೌಂಡೇಶನ ವಿಭಾಗೀಯ ವ್ಯವಸ್ಥಾಪಕಿ ಅಂಜಲಿನಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅಕ್ಷರ ಫೌಂಡೇಶನ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಇಲಾಖೆಯ ಸಹಕಾರದೊಂದಿಗೆ ಸಕ್ರೀಯವಾಗಿ ತೊಡಗಿಸಿಕೊಂಡು, ಪ್ರಸಕ್ತ ಸಾಲಿಗೆ 25 ವರ್ಷಗಳು ಪೂರೈಸಲಿವೆ. ಜಿಲ್ಲೆಯಲ್ಲಿ ಗಣಿತ ಸ್ಪರ್ಧೆಯಲ್ಲಿ ಉತ್ತಮ ಫಲಿತಾಂಶ ಪಡೆದ 25 ಶಾಲೆಗಳಿಗೆ ಮತ್ತು 25 ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸಲಾಗುತ್ತಿದೆ. ಮತ್ತು ಗಣಿತ ಕಲಿಕಾ ಆಂದೋಲನದ ಗಣಿತ ಸ್ಪರ್ಧೆಯ ವಿವರ ಬಿಡುಗಡೆ ಮಾಡಿ, ಮಕ್ಕಳ ಗಣಿತ ಕಲಿಕೆಯ ಪ್ರಗತಿಯ ಕುರಿತು ಮಾತನಾಡಿದರು.

ನಂತರ ಗಣಿತ ವಿಚಾರಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತನ ಸಹಾಯಕ ಕಾರ್ಯದರ್ಶಿ ಅಜಯ ಎನ್, ಗಣಿತ ಕಲಿಕಾ ಆಂದೋಲನದ ಜಿಲ್ಲಾ ನೋಡಲ್ ಅಧಿಕಾರಿ ಡಯಟ್‍ನ ರಮೇಶ ಯರಳಿ, ಹಿರಿಯ ಶಿಕ್ಷಕರಾದ ವಿ.ಎಫ್.ಚುಳಕಿ, ರಾಜಶೇಖರ ಹೊನ್ನಪ್ಪನವರ, ಬಮ್ಮಿಗಟ್ಟಿ ಗ್ರಾಮಪಂಚಾಯಿತಿ ಅಧ್ಯಕ್ಷ ಮಂಜುನಾಥ ಧೂಳಿಕೊಪ್ಪ ಅವರು ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಮಕೃಷ್ಣ ಸದಲಗಿ, ಉಮಾದೇವಿ ಬಸಾಪೂರ, ಮಹಾದೇವಿ ಮಾಡಲಗೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಕುಮಾರ್.ಕೆ.ಎಫ್, ಸಂತೋಷ ದಂಡಗಲ್, ಸುಜಾತ ಚವ್ಹಾಣ ಪಾಲ್ಗೊಂಡಿದ್ದರು.

ಅಕ್ಷರ ಫೌಂಡೇಶನ್ ಜಿಲ್ಲಾ ಸಂಯೋಜಕ ಹನಮಂತಮ ಸಾಲಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅರುಣ ನವಲೂರ ಅವರು ಸ್ವಾಗತಿಸಿದರು. ರವಿರಾಜಾ ಬ್ಯಾಹಟ್ಟಿ, ಎಮ್.ಎಸ್.ಚಿಕ್ಕನಗೌಡರ, ಸಂತೋಷ ಸಂಗನವರ ಅವರು ಸನ್ಮಾನಿತ ಶಾಲೆಗಳ ವಿವರ ಪ್ರಸ್ತುತ ಪಡಿಸಿದರು.

ಕಾರ್ಯಕ್ರಮದಲ್ಲಿ ಗಣಿತ ವಿಷಯದಲ್ಲಿ ಉತ್ತಮ ಸಾಧನೆ ಮಾಡಿರುವ 25 ಶಾಲೆಯ ಮುಖ್ಯ ಶಿಕ್ಷಕರು, 25 ಗ್ರಾಮ ಪಂಚಾಯತ್ ಅದ್ಯಕ್ಷರು, ಪಿ.ಡಿ,ಓ, ಇತರೆ ಅಧಿಕಾರಿಗಳು, ಸಮುದಾಯದವರು ಭಾವಹಿಸಿ, ಯಶಸ್ವಿಗೊಳಿಸಿದರು.
**

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ