ಕೊಪ್ಪಳ ಜುಲೈ 08ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 7ರ ಸಂಜೆ 06 ಗಂಟೆವರೆಗೆ ಒಟ್ಟು 11,39,824 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟು 11,39,824 ಗಣತಿ ನಮೂನೆಗಳನ್ನು (Enumeration Forms) ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 2,12,614 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
