Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ ನಗರಸಭೆ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಜೂ.17

ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 2019-20 ರಿಂದ 2025-26ನೇ ಸಾಲಿನ ಎಸ್.ಎಫ್.ಸಿ ಯೋಜನೆ ಮತ್ತು ನಗರಸಭೆ ನಿಧಿಯಡಿ ಶೇ.24.10 (ಎಸ್‌ಸಿಎಸ್‌ಪಿ, ಟಿಎಸ್‌ಪಿ), ಶೇ.7.25 ಮತ್ತು ಶೇ.5 ಅನುದಾನದಡಿ ವಿವಿಧ ಯೋಜನೆಗಳಡಿ ಸೌಲಭ್ಯಗಳಿಗಾಗಿ ಸಿರುಗುಪ್ಪ ನಗರದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.25 ಕೊನೆಯ ದಿನ.

*ಸೌಲಭ್ಯಗಳು:*

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಸಹಾಯಧನ ಮತ್ತು ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ಸಹಾಯಧನ.

ಇತರೆ ಹಿಂದುಳಿದ ವರ್ಗಗಳ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಮತ್ತು ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು, ಪಕ್ಕಾ ಮನೆ ನಿರ್ಮಾಣಕ್ಕೆ, ವೈಯಕ್ತಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಸಹಾಯಧನ.

ವಿಶೇಷ ಚೇತನರಿಗೆ ಪಕ್ಕಾ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಮತ್ತು ಹೊಸದಾಗಿ ವಾರ್ಷಿಕ ಜೀವವಿಮೆ ಮಾಡಿಸಲು ಸಹಾಯಧನ ನೀಡಲಾಗುವುದು.

ಬೇಕಾದ ದಾಖಲೆ:

ನಿಗದಿತ ಅರ್ಜಿ ನಮೂನೆ, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐ.ಡಿ ಕಾರ್ಡ್, 2 ಫೋಟೋ, ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಬಿ.ಇ, ಎಂ.ಬಿ.ಬಿ.ಎಸ್ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ, ಪಕ್ಕಾ ಮನೆ/ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿದಾರರ ಹೆಸರಿನಲ್ಲಿರುವ ಆಸ್ತಿಯ ದಾಖಲೆಗಳು, ಅಂಗವಿಕಲತೆ ಇದ್ದಲ್ಲಿ ವೈದ್ಯಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರಸಭೆ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ