ಸಿರುಗುಪ್ಪ, ಸೆ.28: ಸಿರುಗುಪ್ಪ–ಅರಳಿಗನೂರು ಮಾರ್ಗದಲ್ಲಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಗಳು ನಿತ್ಯ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಬೆಳಗ್ಗೆ ಶಾಲಾ-ಕಾಲೇಜು ಆರಂಭದ ಸಮಯ ಹಾಗೂ ಸಂಜೆ ಬಿಡುವ ವೇಳೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬಸ್ಗಳಲ್ಲಿ ಕುಳಿತುಕೊಳ್ಳುವುದಿರಲಿ, ನಿಂತುಕೊಳ್ಳಲೂ ಸ್ಥಳವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅನಿವಾರ್ಯವಾಗಿ ವಿದ್ಯಾರ್ಥಿಗಳು ಜೀವದ ಹಂಗು ತೊರೆದು ಬಸ್ಗಳ ಬಾಗಿಲ ಬಳಿ ನಿಂತುಕೊಂಡೇ ಪ್ರಯಾಣಿಸುವಂತಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಕನಿಷ್ಠ ಒಂದೆರಡು ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು ಎಂದು ಸ್ಥಳೀಯರು ಸಾರಿಗೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.