Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ಕರಡಿಗಳ ಯಶಸ್ವಿ ಸೆರೆ


ಬಳ್ಳಾರಿ,ಮಾ.26

ಸಂಡೂರು ತಾಲ್ಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಕಳೆದ ಹತ್ತು ತಿಂಗಳಿನಿ0ದ ಬೀಡುಬಿಟ್ಟಿದ್ದ ತಾಯಿ ಕರಡಿ ಹಾಗೂ ಎರಡು ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ‘ಆಟೋಮ್ಯಾಟಿಕ್ ಮೊಬೈಲ್ ಆಪ್ ಆಧಾರಿತ ಕೇಜ್ ಲಾಕಿಂಗ್ ಸಿಸ್ಟಮ್' ಬಳಸುವ ಮೂಲಕ ಮೂರೂ ಕರಡಿಗಳನ್ನು ಏಕಕಾಲಕ್ಕೆ ಬಂಧಿಸಿರುವುದು ವಿಶೇಷವಾಗಿದೆ.

ಕಳೆದ ಸುಮಾರು 10 ತಿಂಗಳಿನಿ0ದ ಈ ಕರಡಿಗಳ ಕುಟುಂಬ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದರೂ, ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿರಲಿಲ್ಲ. ವನ್ಯಜೀವಿ ವಿಭಾಗದ ಪಿಸಿಸಿಎಫ್ ಅವರ ಆದೇಶದನ್ವಯ, ಬಳ್ಳಾರಿ ಡಿಸಿಎಫ್ ಕೆ.ಎನ್.ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ಎಸಿಎಫ್ ಶರಣ್ ಕುಮಾರ್, ಆರ್‌ಎಫ್‌ಒಗಳಾದ ಸಯ್ಯದ್ ದಾದಾ ಖಲಂದರ್ ಮತ್ತು ಮಂಜುನಾಥ್, ಡಿಆರ್‌ಎಫ್‌ಒಗಳಾದ ಮೋಹನ್ ಹಾಗೂ ಗುರುಸ್ವಾಮಿ, ಬಿಎಫ್‌ಒಗಳಾದ ವೆಂಕಟೇಶ್ ಮತ್ತು ಶ್ರೀಧರ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇವರಿಗೆ ಪಶುವೈದ್ಯರಾದ ಡಾ. ಪ್ರಕೃತಿ ಹಾಗೂ ವೈಲ್ಡ್ ಲೈಫ್ ಎಸ್‌ಒಎಸ್ ಎನ್‌ಜಿಒ ಸಂಸ್ಥೆಯವರು ಸಾಥ್ ನೀಡಿದ್ದರು.

ಸೆರೆಹಿಡಿದ ತಾಯಿ ಕರಡಿಗೆ ಮುಂದಿನ ದಿನಗಳಲ್ಲಿ ಅದರ ಚಲನವಲನದ ಮೇಲೆ ನಿಗಾ ಇಡಲು ‘ರೇಡಿಯೋ ಕಾಲರ್' ಅಳವಡಿಸಲಾಗಿದೆ. ನಂತರ ಮೇಲಾಧಿಕಾರಿಗಳ ಸೂಚನೆಯಂತೆ, ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿ ಹಾಗೂ ಮರಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ