Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಪ್ತಿ ಮಾಡಲಾದ 608.70 ಕ್ವಿಂ. ಅಕ್ಕಿ ಹರಾಜು ಜುಲೈ 27 ರಂದು

ಕೊಪ್ಪಳ ಜುಲೈ 17 ಕೊಪ್ಪಳ ತಾಲ್ಲೂಕಿನಲ್ಲಿ 2020-21 ರಿಂದ 2022-23 ರ ಸಾಲಿನವರೆಗೆ ವಿವಿಧ ಪ್ರಕರಣಗಳಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ರ ಅಡಿಯಲ್ಲಿ ಜಪ್ತಿ ಮಾಡಲಾದ ಒಟ್ಟು 608.70 ಕ್ವಿಂಟಾಲ್ ಅಕ್ಕಿಯನ್ನು ಜುಲೈ 27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಸಗಟು ಮಳಿಗೆಯಲ್ಲಿ ಬಹಿರಂಗ ಹರಾಜು ಮಾಡಲಾಗುತಿದ್ದು, ಆಸಕ್ತಿಯುಳ್ಳ ಎ.ಪಿ.ಎಂ.ಸಿ ಪರವಾನಿಗೆದಾರರು ಷರತ್ತುಗಳಿಗೆ ಒಳಪಟ್ಟು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು ಎಂದು ಕೊಪ್ಪಳ ತಹಶೀಲ್ದಾರರಾದ ಬಸವರಾಜ ತೆನ್ನಳ್ಳಿ ಅವರು ತಿಳಿಸಿದ್ದಾರೆ.
*ಷರತ್ತುಗಳು:*
ಹರಾಜಿನಲ್ಲಿ ಭಾಗವಹಿಸಲು ಬಿಡ್ಡುದಾರರು ಎ.ಪಿ.ಎಂ.ಸಿ ಪರವಾನಿಗೆ ಹೊಂದಿರಬೇಕು. ಬಿಡ್ಡುದಾರರು ಹರಾಜಿನ ದಿನ 1 ಗಂಟೆ ಮುಂಚಿತವಾಗಿ ಹಾಜರಾಗಿ ಶೇ.10 ರಷ್ಟು ಮೊಬಲಗನ್ನು ಮುಂಗಡವಾಗಿ ಠೇವಣಿ ಪಾವತಿಸಬೇಕು. ಎ.ಪಿ.ಎಂ.ಸಿ ಪರವಾನಿಗೆ ಪ್ರತಿ, ಆಧಾರ್ ಕಾರ್ಡ್ ಪ್ರತಿ, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಸಲ್ಲಿಸಬೇಕು. ಹರಾಜು ಮುಗಿದ ನಂತರ ಠೇವಣಿ ಮೊತ್ತವನ್ನು 2ನೇ ಗರಿಷ್ಠ ಬಿಡ್ಡುದಾರರು ಹೊರತುಪಡಿಸಿ ಉಳಿದ ಬಿಡ್ಡುದಾರರಿಗೆ ಸ್ಥಳದಲ್ಲಿಯೇ ಹಿಂತಿರುಗಿಸಲಾಗುವುದು. ಗರಿಷ್ಠ ಬಿಡ್ಡುದಾರರಿಗೆ ನಿಗದಿತ ಅವಧಿಯೊಳಗೆ ಪೂರ್ಣ ಹಣವನ್ನು ಪಾವತಿಸಲು ವಿಫಲರಾದಲ್ಲಿ ಠೇವಣಿ ಹಣವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ನಂತರ 2ನೇ ಬಿಡ್ಡುದಾರರಿಗೆ ಅವಕಾಶ ಮಾಡಿಕೊಡಲಾಗುವುದು.(ಇವರಿಗೂ ಸಹ ಇದೇ ನಿಯಮ ಅನ್ವಯವಾಗುತ್ತದೆ.)
ಠೇವಣಿ ಮೊತ್ತವನ್ನು ಪಾವತಿಸದೇ ಇರುವವರು ಹರಾಜಿನಲ್ಲಿ ಭಾಗವಹಿಸುವಂತಿಲ್ಲ. ಸರ್ಕಾರಕ್ಕೆ ಜಪ್ತಿ ಮಾಡಿಕೊಂಡಿರುವ ಅಕ್ಕಿಯನ್ನು ಹಾಲಿ ಇರುವ ಸ್ಥಿತಿಯಲ್ಲಿಯೇ ಹರಾಜು ಮಾಡಲಾಗುವುದು. ಹರಾಜಿನಲ್ಲಿ ಅಕ್ಕಿಯನ್ನು ಪಡೆದವರು ತಕ್ಷಣವೇ ಉಳಿದ ಹಣವನ್ನು ಸರ್ಕಾರಕ್ಕೆ ಪಾವತಿ ಮಾಡತಕ್ಕದ್ದು ಮತ್ತು ಹರಾಜಾದ ಅಕ್ಕಿಯನ್ನು ಆದೇಶ ನೀಡಿದ ತಕ್ಷಣ ತನ್ನ ಸ್ವಂತ ಖರ್ಚಿನಲ್ಲಿಯೇ ಎತ್ತುವಳಿ ಮತ್ತು ಸಾಗಾಣಿಕೆ ಮಾಡಿಕೊಳ್ಳಬೇಕು. ಎ.ಪಿಎಂ.ಸಿ ಸೆಸ್ ಮತ್ತು ಇತರೆ ಯಾವುದಾದರು ಸರ್ಕಾರಕ್ಕೆ ಕಟ್ಟಬೇಕಾದ ಸೆಸ್‌ಗಳನ್ನು ಹರಾಜು ಹಿಡಿದ ವ್ಯಕ್ತಿಗಳೇ ಭರಿಸತಕ್ಕದ್ದು. ಹರಾಜಿನಲ್ಲಿ ಭಾಗವಹಿಸಲು ಭದ್ರತಾ ಠೇವಣಿಯನ್ನು ಪಾವತಿಸಿದ ಬಿಡ್ಡುದಾರರು ಗೊತ್ತುಪಡಿಸಿದ ದಿನಾಂಕ/ವೇಳೆಗಿಂತ 1 ಗಂಟೆ ಮುಂಚಿತವಾಗಿ ಹಾಜರಿರತಕ್ಕದ್ದು ಮತ್ತು ಆಹಾರ ಧಾನ್ಯ ವಿಕ್ಷಣೆ ಮಾಡಬಹುದಾಗಿರುತ್ತದೆ.
ಹರಾಜಿನಲ್ಲಿ ನಿಗದಿಪಡಿಸಿದ ಸರ್ಕಾರಿ ಸವಾಲು ಮೊತ್ತಕ್ಕಿಂತ ಕಡಿಮೆ ಮೊತ್ತ ಕೂಗಿದಲ್ಲಿ ಹಾಗೂ ಹರಾಜು ಸಮಯದಲ್ಲಿ ಬಿಡ್ಡುದಾರರು ಸಂಖ್ಯೆ ಕಡಿಮೆ ಇದ್ದಲ್ಲಿ ಹರಾಜು ಮುಂದೂಡುವ ಅಧಿಕಾರ ಹಾಗೂ ಅಂತಿಮವಾಗಿ ಹರಾಜು ಒಪ್ಪಿಕೊಳ್ಳುವುದು ಅಥವಾ ತಿರಸ್ಕರಿಸುವ ತೀರ್ಮಾನವು ತಹಶೀಲ್ದಾರರಿಗೆ ಒಳಪಟ್ಟಿರುತ್ತದೆ ಎಂದು ಕೊಪ್ಪಳ ತಹಶೀಲ್ದಾರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ; ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ: ಸಿಎಸ್ ಚಂದ್ರಭೂಪಾಲ್ಬರಗಾಲದ ಆತಂಕ: ಪರ್ಯಾಯ ಬೆಳೆ ಯೋಜನೆ ಹಾಗೂ ರೈತರ ಜಾಗೃತಿ ಸಭೆ ಆಯೋಜಿಸುವಂತೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಜಪ್ತಿ ಮಾಡಲಾದ 608.70 ಕ್ವಿಂ. ಅಕ್ಕಿ ಹರಾಜು ಜುಲೈ 27 ರಂದುರೇಷ್ಮೆ ಇಲಾಖೆ ವಿವಿಧ ಯೋಜನೆಗಳು: ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ -- ಎಸ್‌ಐಆರ್ ವೇಳಾಪಟ್ಟಿ ಮರುನಿಗದಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಜುಲೈ 17 ರಿಂದ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆ: ನಿಷೇದಾಜ್ಞೆ ಜಾರಿಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಶೇ. 99.78 ರಷ್ಟು ಎಸ್‌ಐಆರ್ ಗಣತಿ ನಮೂನೆಗಳ ವಿತರಣೆಬಳ್ಳಾರಿಯಲ್ಲಿ ಜು.18 ರಂದು ಮಿನಿ ಉದ್ಯೋಗ ಮೇಳ: ಉಚಿತ ಪ್ರವೇಶರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ಸಮ್ಮತಿ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಸ್ವತಂತ್ರರು; ಭೂಮಿಯ ಯಥಾಸ್ಥಿತಿ ಬದಲಾಗಲ್ಲ ಇದು ನನ್ನ ಕನಸಿನ ಯೋಜನೆಯಲ್ಲ, ಹಿಂದಿನ ಸರ್ಕಾರಗಳ ಯೋಜನೆ: ಡಿ.ಕೆ. ಶಿವಕುಮಾರ್