Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ದೊಣ್ಣೆ ಹಾಗೂ ಬಾಟಲಿಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಶಿವಮೊಗ್ಗ, ಸೆ, 02
ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ತೆಗೆದು ದೊಣ್ಣೆ ಮತ್ತು ಬಾಟಲಿಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಸಿಜೆ ಮತ್ತು ಸಿಜೆಎಂ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಲವಗೊಪ್ಪದ ಶುಗರ್ ಫ್ಯಾಕ್ಟರಿ ಹತ್ತಿರದ ವಾಸಿಯಾದ ಶ್ರೀಮತಿ ನಸೀನಾ ಬಾನು (ಶಿಕ್ಷಕರು) ಶಿಕ್ಷೆಗೆ ಒಳಗಾದ ಆರೋಪಿ.
ಪ್ರಕರಣದ ವಿವರ:
ಶಿವಮೊಗ್ಗದ ಮಲವಗೊಪ್ಪದ ಶುಗರ್ ಫ್ಯಾಕ್ಟರಿ ಹತ್ತಿರದ ವಾಸಿಯಾದ ಸಕ್ರೀಯ ಬಿನ್ ದಾದಾರ್ಪಿ ಎಂಬುವರ ಕೊನೆಯ ತಂಗಿಯ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ನಸೀನಾ ಬಾನು ಹಾಗೂ ಇನ್ನೊಬ್ಬರು (ಪ್ರಸ್ತುತ ಮೃತಪಟ್ಟಿದ್ದಾರೆ) ಜಗಳ ತೆಗೆದು, ಸಕ್ರೀಯ ಅವರ ಮೇಲೆ ದೊಣ್ಣೆ ಮತ್ತು ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 473/2020 ರಂತೆ ದೂರು ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಕೈಗೊಂಡ ತನಿಖಾಧಿಕಾರಿ ರಾಮಕುಮಾರ್ ವಿ. ಅವರು ತನಿಖೆ ಪೂರ್ಣಗೊಳಿಸಿ ಮಾನ್ಯ 1ನೇ ಹೆಚ್ಚುವರಿ ಸಿಜೆ ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಸಿ.ಸಿ. 1008/2024 ರಂತೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸಾಕ್ಷಿ ವಿಚಾರಣೆ ನಡೆಸಿ, ಉಭಯ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಶ್ರೀಯುತ ಪದ್ಮಾಕರ ವನಕುದ್ರೆ ಅವರು ದಿನಾಂಕ 31-08-2026 ರಂದು ಆರೋಪಿ ನಸ್ರೀನಾ ಬಾನು ಅವರಿಗೆ ಐಪಿಸಿ ಕಲಂ 323, 324 ಮತ್ತು 506 ರಡಿಯ ಅಪರಾಧಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸದರಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜನೆಯ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀ ಗೋವಿಂದರಾಜ್ ಎನ್. ಅವರು ವಾದ ಮಂಡಿಸಿದ್ದರು.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೊಣ್ಣೆ ಹಾಗೂ ಬಾಟಲಿಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ​ಸೆಪ್ಟೆಂಬರ್ 4ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ:ಪಾಲಿಕೆ ಆದೇಶಅಲ್ಪಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಅರ್ಜಿ ಆಹ್ವಾನ*ಲಂಚ ಪ್ರಕರಣ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ರೂ.40 ಸಾವಿರ ದಂಡವಿದೇಶದಲ್ಲಿ ಅಧ್ಯಯನ–2026’: ಕೊಪ್ಪಳ ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ ----ಸುಕ್ಷೇತ್ರ ಹುಲಿಗಿ ದೇವಸ್ಥಾನದಲ್ಲಿ ಶುಚಿತ್ವ ಕಾರ್ಯಕ್ಕೆ 15 ದಿನಗಳ ಗಡುವು ನೀಡಿದ ಸಚಿವರು ===ಸುಕ್ಷೇತ್ರ ಹುಲಿಗಿ ದೇವಸ್ಥಾನದಲ್ಲಿ ಶುಚಿತ್ವ ಕಾರ್ಯಕ್ಕೆ 15 ದಿನಗಳ ಗಡುವು ನೀಡಿದ ಸಚಿವರು ===ಸುಕ್ಷೇತ್ರ ಹುಲಿಗಿ ದೇವಸ್ಥಾನದಲ್ಲಿ ಶುಚಿತ್ವ ಕಾರ್ಯಕ್ಕೆ 15 ದಿನಗಳ ಗಡುವು ನೀಡಿದ ಸಚಿವರು ===