Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಜು.17

ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಯೋಜನೆಗಳು:*

ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆ:

ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ (21*21*3ಮೀ), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಲಾಸ್ಟಿಕ್ ಹೊದಿಕೆ, 20 ಹೆಚ್.ಪಿ ಕಡಿಮೆಯುಳ್ಳ ಟ್ರಾಕ್ಟರ್, ಟ್ರಾಕ್ಟರ್ ಚಾಲಿತ ಔಷಧಿ ಸಿಂಪರಣೆ ಉಪಕರಣಗಳು ಮತ್ತು ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ವಿತರಿಸಲಾಗುತ್ತದೆ.

ಪ್ರಧಾನ ಮಂತ್ರಿ-ರಾಷ್ಟಿçÃಯ ಕೃಷಿ ವಿಕಾಸ ಯೋಜನೆ- ಪ್ರತಿ ಹನಿಗೆ ಅಧಿಕ ಬೆಳೆ:

ಪ್ರಧಾನ ಮಂತ್ರಿ-ರಾಷ್ಟಿçÃಯ ಕೃಷಿ ವಿಕಾಸ ಯೋಜನೆ- ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಹೊಸದಾಗಿ ಅಳವಡಿಸುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕೇಂದ್ರ ಪುರಸ್ಕೃತ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆ:

2025-26ನೇ ಸಾಲಿನಲ್ಲಿ ತಾಳೆಬೆಳೆ ಬೆಳೆಯಲು ಆಸಕ್ತಿ ಇರುವ ರೈತರು ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಪ್ರತೀ ಹೆಕ್ಟೇರ್‌ಗೆ ಶೇ.50 ರಂತೆ ರೂ.29,000, ಮೊದಲನೇ ವರ್ಷದಿಂದ ನಾಲ್ಕು ವರ್ಷಗಳ ಬೇಸಾಯ ನಿರ್ವಹಣೆ ಕಾರ್ಯಕ್ರಮಕ್ಕೆ ಪ್ರತಿ ವರ್ಷ ನಿರ್ವಹಣೆಗೆ ರೂ.5250, ಪ್ರತಿ ಹೆಕ್ಟೇರ್‌ಗೆ ಸಹಾಯಧನ ನೀಡಲಾಗುವುದು.

ಅಂತರ ಬೆಳೆಗೆ ರೂ.5250, ಎತ್ತರವಾದ ತಾಳೆ ಮರಗಳಿಂದ ಹಣ್ಣು ಕಟಾವು ಮಾಡಲು ರೂ.1000, ಪ್ರತಿ ಟನ್‌ಗೆ (ಗರಿಷ್ಠ 60 ಟನ್ ಮಾತ್ರ) ಸಹಾಯಧನ, ಡೀಸೆಲ್ ಪಂಪ್ ಸೆಟ್ ಕೊಳ್ಳಲು ರೂ.8000, ಕೊಳವೆ ಬಾವಿಗೆ ರೂ.50000, ಸಹಾಯಧನ, ತಾಳೆ ಹಣ್ಣು ಕಟಾವು ಮಾಡುವ ಉಪಕರಣ, ಮೊಟೊರೈಸ್ಡ್ ಚಿಸೆಲ್ ರೂ.15000, ತಾಳೆ ಹಣ್ಣು ಕಟಾವು ಏಣಿ ರೂ.5000, ಚಾಫ್ ಕಟ್ಟರ್ ರೂ.50000, ಟ್ರಾಕ್ಟರ್ ಟ್ರೋಲಿ ಖರೀದಿಸಲು ರೂ.1,60,000 (ಶೇ.50 ರಂತೆ) ಸಹಾಯಧನ ನೀಡಲಾಗುವುದು.

ಈ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಶೇಷ ಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ