Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೈರಿ ಉದ್ಯಮಕ್ಕೆ ಬೆಂಬಲ, ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸುವುದೇ ‘ವಿಶ್ವ ಹಾಲು ದಿನ'ದ ಪ್ರಾಮುಖ್ಯತೆ

ಬಳ್ಳಾರಿ,ಜೂ.02
ಡೈರಿ ಉದ್ಯಮಕ್ಕೆ ಸಂಬAಧಿಸಿದ ಉಪಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಬೆಂಬಲಿಸುವುದು ‘ವಿಶ್ವ ಹಾಲು ದಿನ’ದ ಪ್ರಾಮುಖ್ಯತೆ ಆಗಿದೆ ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷ ಎನ್.ಸತ್ಯನಾರಾಯಣ ಅವರು ಹೇಳಿದರು.
ನಗರದ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ (ಬಿ.ಎಂ.ಸಿ.ಆರ್.ಸಿ) ಬಿ.ಸಿ.ರಾಯ್ ಸಭಾಂಗಣದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಹಾಲು ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಾಗತಿಕ ಆಹಾರವಾಗಿ ಹಾಲಿನ ಪ್ರಾಮುಖ್ಯತೆಯನ್ನು ಗುರುತಿಸಲು ವಿಶ್ವ ಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (ಎಫ್.ಎ.ಓ) 2001 ರಿಂದ ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಿತು ಎಂದು ಅವರು ತಿಳಿಸಿದರು.
ಕೆ.ಎಂ.ಎಫ್ (ಕಹಾಮ) ಬೆಂಗಳೂರು ಉತ್ಪಾದನಾ ವಿಭಾಗದ ನಿರ್ದೇಶಕ ಬಿ.ಆರ್. ಪ್ರಭುಶಂಕರ ಅವರು ಮಾತನಾಡಿ, ಕರ್ನಾಟಕ ರಾಜ್ಯದಿಂದ ಪ್ರತಿದಿನ ಬರೋಬ್ಬರಿ ಒಂದು ಕೋಟಿ ಹನ್ನೊಂದು ಲಕ್ಷ ಲೀಟರ್ ಗುಣಮಟ್ಟದ ಹಾಲನ್ನು ಶೇಖರಿಸಿ ಗ್ರಾಹಕರಿಗೆ ಯಶಸ್ವಿಯಾಗಿ ಸರಬರಾಜು ಮಾಡಲಾಗುತ್ತಿದೆ. ಈ ಮೂಲಕ ಭಾರತದಲ್ಲಿಯೇ ಅತಿ ಹೆಚ್ಚು ಹಾಲು ಸಂಗ್ರಹಣೆ ಮಾಡುವ ಎರಡನೇ ದೊಡ್ಡ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ ಎಂದು ತಿಳಿಸಿದರು.
ಒಕ್ಕೂಟದ ಪ್ರಭಾರ ವ್ಯವಸ್ಥಾಪಕ ಎಸ್.ವೆಂಕಟೇಶ ಗೌಡ ಅವರು ಮಾತನಾಡಿ, ಮಾನವನ ಜೀವನದಲ್ಲಿ ಹಾಲಿನ ಅಗತ್ಯ ಮತ್ತು ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡುವುದು ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿರುವ ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್-ಬಿ2 ನಂತಹ ಪೋಷಕಾಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದೇ ವಿಶ್ವ ಹಾಲು ದಿನಾಚರಣೆಯ ಮುಖ್ಯ ಉದ್ದೇಶ ಎಂದು ಹೇಳಿದರು.
ಒಕ್ಕೂಟದ ನಿರ್ದೇಶಕ ಜಿ.ಕೃಷ್ಣರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ರೈತರಿಂದಲೇ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಗುಣಮಟ್ಟದ ಹಾಲನ್ನು ಶೇಖರಿಸಿ, ಬಿ.ಎಂ.ಸಿ ಕೇಂದ್ರಗಳಲ್ಲಿ ಶೈಥೀಕರಿಸಿ ಒಕ್ಕೂಟಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದು ವಿವರಿಸಿದರು.
ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಸುದರ್ಶನ ರೆಡ್ಡಿ ಅವರು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಹತ್ವ ಹಾಗೂ ಸಮತೋಲಿತ ಆಹಾರದಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ಹೇಗೆ ಸಹಕಾರಿ ಎಂಬುದನ್ನು ಸವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಉಪ ವ್ಯವಸ್ಥಾಪಕ(ಗು.ನಿ) ಟಿ. ಮಲ್ಲಿಕಾರ್ಜುನ, ಮಾರುಕಟ್ಟೆ ಸಹಾಯಕರಾದ ಲೋಹಿತಕುಮಾರ, ಪ್ರಸನ್ನ ಕುಮಾರ, ಕೆಮಿಸ್ಟ್ ಕೆ.ಸರೋಜಾ, ಸಿ.ಎನ್.ಮಂಜುನಾಥ, ಬಾಬು, ಬಿ.ಎಂ.ಸಿ.ಆರ್.ಸಿ ಪ್ರಾಧ್ಯಾಪಕ ಡಾ.ರಮೇಶ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸರ್ಕಾರಿ ಶುಶ್ರೂಷಕ ವಿದ್ಯಾಲಯದ ಉಪನ್ಯಾಸಕರಾದ ನಂದಿನಿ ಸ್ವಾಗತಿಸಿದರು. ಒಕ್ಕೂಟದ ಉಪ ವ್ಯವಸ್ಥಾಪಕ ಟಿ.ಮಲ್ಲಿಕಾರ್ಜುನ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಂದಿನಿ ಸುವಾಸಿತ ಹಾಲು ವಿತರಿಸಲಾಯಿತು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ