Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಸ್ಐ ಸಾವು ಪ್ರಕರಣ: ತನಿಖೆ ನಂತರ ಸತ್ಯಾಂಶ ಬಯಲು

ಬೆಂಗಳೂರು (ಆಗಸ್ಟ್ 3):- ಯಾದಗಿರಿ ಪಿಎಸ್ಐ ಸಾವು ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡಿಷನ್ ಹಾಕಲಾಗಿದೆ ಎಂದು ತಿಳಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ