Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025...... ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ - ಜಿಲ್ಲಾಧಿಕಾರಿ ನಲಿನ್ ಅತುಲ್


ಕೊಪ್ಪಳ ಜನವರಿ 30: ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳು ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕುಷ್ಠರೋಗ ಪ್ರಕರಣಗಳು ಪತ್ತೆಯಾದ ಪ್ರದೇಶ, ವಾರ್ಡುಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಕುಷ್ಠರೋಗ ಸಂಪೂರ್ಣ ವಾಸಿಯಾಗಬಲ್ಲ ರೋಗವಾಗಿದ್ದು, ವೈಜ್ಞಾನಿಕವಾಗಿ ನಿರಂತರ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನು ರೋಗಿಗೆ ಹಾಗೂ ರೋಗಿಯ ಕುಟುಂಬಕ್ಕೆ ಮನದಟ್ಟು ಮಾಡಬೇಕು. ರೋಗದ ಲಕ್ಷಣಗಳು ಕಂಡುಬರುವವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮೂಲಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಆಶ್ರಮ ಶಾಲೆ, ಹಾಸ್ಟೆಲ್‌ಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆಗಳಲ್ಲಿನ ಪ್ರರ್ಥನೆ ಸಂದರ್ಭದಲ್ಲಿ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಕಂಡುಬಂದ ಕುಷ್ಠರೋಗ ಪ್ರಕರಣ, ರೋಗಿಯ ಚಿಕಿತ್ಸೆ, ನಿರಂತರ ಚಿಕಿತ್ಸೆಯ ನಂತರ ಗುಣಮುಖರಾದ ಬಗ್ಗೆ ದೃಢೀಕರಣ, ರೋಗಿಗಳಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳು ದೊರೆತಿರುವ ಬಗ್ಗೆ ಹಾಗೂ ನಿರಂತರ ಚಿಕಿತ್ಸೆ ನಂತರ ಅಥವಾ ಸಮರ್ಪಕ ಚಿಕಿತ್ಸೆಯ ಕೊರತೆಯಿಂದಾಗಿ ರೋಗ ವಾಸಿಯಾಗದೆ ಇರುವ ಕುರಿತಾಗಿ 5 ವರ್ಷಗಳ ಒಟ್ಟಾರೆ ತಾಲ್ಲೂಕುವಾರು ವರದಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ ಪ್ರಕಾಶ ಹೆಚ್. ಅವರು ಮಾತನಾಡಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ವರ್ಷದ ಘೋಷ ವಾಕ್ಯ ``ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಬಾಧಿತರಾದ ಎಲ್ಲರನ್ನು ಹಿಂದುಳಿಯಂತೆ ನೋಡಿಕೊಳ್ಳೋಣ'' ಎಂಬುದಾಗಿದೆ. ಜನರಲ್ಲಿ ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಹಾಗೂ ದೇಹದ ಮೇಲೆ ಯಾವುದೇ ಅಸಹಜ ವ್ಯತ್ಯಾಸಗಳು ಕಂಡುಬಂದಲ್ಲಿ ಅಂತಹವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು ಟಿ., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶೀಧರ್ ಎ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರಾಮಾಂಜನೇಯ, ಡಾ.ಗೌರಿಶಂಕರ ಹಾಗೂ ಡಾ.ಅಮರೇಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ