Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅನಿರೀಕ್ಷಿತ ತಪಾಸಣೆ: ನಿಷೇಧಿತ ವಸ್ತು ಜಪ್ತಿ





ಬಳ್ಳಾರಿ,ಡಿ.23

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ.

ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್ ಅವರ ನಿರ್ದೇಶನದ ಮೇರೆಗೆ ‘ಕಾರಾಗೃಹ ಸುಧಾರಣಾ ಸಂಕಲ್ಪ' ಅಭಿಯಾನದಡಿ ಡಿ.20ರ ರಾತ್ರಿ 10 ರಿಂದ 12.10 ರವರೆಗೆ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಜೈಲರ್, ಸಹಾಯಕ ಜೈಲರ್ ಹಾಗೂ ಹಗಲು, ರಾತ್ರಿ ಪಹರೆಯ ಸಿಬ್ಬಂದಿ ಒಳಗೊಂಡ ತಂಡವು ಕಾರಾಗೃಹದ ಒಳ ಆವರಣದಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳಾದ 6 ಕೀ-ಪ್ಯಾಡ್ ಮೊಬೈಲ್ ಮತ್ತು 2 ಚಾರ್ಜರ್ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರೆ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (ಸಂಖ್ಯೆ: 233/2025) ದಾಖಲಿಸಲಾಗಿದೆ.

ಸಿಬ್ಬಂದಿಗೆ ಬಹುಮಾನ:

ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಡಿಜಿಪಿ ಅಲೋಕ ಕುಮಾರ್ ಅವರು, ತಂಡಕ್ಕೆ ರೂ.10,000 ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ