Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿಭಾರತ ಕಾರ್ಯಕ್ರಮ ಲಾಂಛನ ಅನಾವರಣ


ಬೆಳಗಾವಿ ಡಿ.9:



ಬೆಳಗಾವಿ  ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ " ಗಾಂಧಿಭಾರತ" ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ

ಅನಾವರಣಗೊಳಿಸಿದರು.



ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ. ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು,ಹೋರಾಟ,ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ,ಸತ್ಯ,ಅಹಿಂಸೆ,ಆರ್ಥಿಕ ಚಿಂತನೆಗಳು,ಸ್ವರಾಜ್,ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.



ಈ ಸಂದರ್ಭದಲ್ಲಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು,ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್,ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಬಸವರಾಜ ರಾಯರೆಡ್ಡಿ,ಚನ್ನರಾಜ ಹಟ್ಟಿಹೊಳಿ,ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ