ಸಿರುಗುಪ್ಪ: ನಗರದ ಸಿದ್ದಪ್ಪ ನಗರದಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಭೇಟಿ ನೀಡಿ ಶಾಲೆಯ ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶೈಕ್ಷಣಿಕ ವ್ಯವಸ್ಥೆ, ತರಗತಿ ಕೊಠಡಿಗಳು ಹಾಗೂ ಶಾಲೆಯ ವಾತಾವರಣವನ್ನು ವೀಕ್ಷಿಸಿ, ಪ್ರಾಂಶುಪಾಲರು ಮತ್ತು ಶಿಕ್ಷಕರಿಂದ ಶಾಲೆಯ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದರು. ಅಲ್ಲದೆ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಕಲಿಕಾ ಚಟುವಟಿಕೆಗಳ ಬಗ್ಗೆ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.