Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ ಜುಲೈ 07ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್‌ಇಂಟರ್‌ವ್ಯೂವನ್ನು ಜುಲೈ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಬಹುದು. 18 ರಿಂದ 25 ವರ್ಷದ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು https://forms.gle/6yCAARAw8q2TiX8U8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ - ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ: ರಾಜ್ಯಕ್ಕೆ ಅಪಾರ ನಷ್ಟಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ