Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಂದಿಗಳ ತೆರವಿ ಕ್ರಮವಹಿಸುವಂತೆ ಹಂದಿ ಸಾಕಾಣಿಕೆ ಮಾಲೀಕರಿಗೆ ಎಚ್ಚರಿಕೆ

ಶಿವಮೊಗ್ಗ, ಏಪ್ರಿಲ್ 03 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳು ಹೆಚ್ಚಾಗಿದ್ದು, ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ಹಂದಿ ಸಾಕಾಣಿಕೆ ಮಾಲೀಕರ ವಿರುದ್ಧ ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರು ನೀಡಿರುತ್ತಾರೆ.

ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪಾಲಿಕೆಯು ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಂದಿ ಮಾಲೀಕರು ಯಾವುದೇ ರೀತಿಯ ಕ್ರಮವಹಿಸಿರುವುದಿಲ್ಲ. ಪಾಲಿಕೆ ಆಯುಕ್ತರ ಅನುಮತಿ ಇಲ್ಲದೆ ಹಂದಿಗಳನ್ನು ಸಾಕುತ್ತಿರುವುದು ಕ.ಪೌ.ನಿ.ಅಧಿನಿಯಮ 1976 ಕಲಂ 344 ಮತ್ತು 345ರನ್ವಯ ಕಾನೂನು ಬಾಹಿರವಾಗಿದ್ದು, ನಗರ ವ್ಯಾಪ್ತಿಯಲ್ಲಿ ಹಂದಿಗಳನ್ನು ಸಾಕಿದ್ದಲ್ಲಿ ತಮ್ಮ ಎಲ್ಲಾ ಹಂದಿಗಳನ್ನು 3 ದಿನಗಳೊಳಗೆ ಖಾಲಿ ಮಾಡತಕ್ಕದ್ದು, ತಪ್ಪಿದ್ದಲ್ಲಿ ನಗರ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಬೀಡಾಡಿ ಹಂದಿಗಳೆoದು ಪರಿಗಣಿಸಿ ಸಾರ್ವಜನಿಕರ ಹಿತಾಸಕ್ತಿಯ ಮೇರೆಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇದರಿಂದ ಆಗುವ ಯಾವುದೇ ನಷ್ಟಕ್ಕೆ ಪಾಲಿಕೆ ಜವಾಬ್ದಾರರಲ್ಲ ಎಂದು ಪಾಲಿಕೆ ಆಯುಕ್ತರು ಹಂದಿ ಸಾಕಾಣಿಕೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ