Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.29 ರಂದುರಾಷ್ಟ್ರಕವಿಕುವೆಂಪು ಜನ್ಮದಿನದ ಅಂಗವಾಗಿ “ವಿಶ್ವಮಾನವ ದಿನಾಚರಣೆ” ಕಾರ್ಯಕ್ರಮ





ಬಳ್ಳಾರಿ,ಡಿ.26

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಅಂಗವಾಗಿ “ವಿಶ್ವಮಾನವ ದಿನಾಚರಣೆ” ಕಾರ್ಯಕ್ರಮವನ್ನು ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಆಲಂಭಾಷ ಅವರು ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ರಾಘವೇಂದ್ರ ಗುಡದೂರು ತಂಡದಿoದ ಸುಗಮ ಸಂಗೀತ ಇರಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ