Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್.1 ರಂದು ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ.





ಶಿವಮೊಗ್ಗ,ಮೇ.31 “ವಿಶ್ವ ಹಾಲು ದಿನಾಚರಣೆ" ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್‌ನ ಕೇಕ್ ಹಾಗೂ ಮಫಿನ್‌ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್‌ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ ಬೆಲೆಗಳಲ್ಲಿ ನೀಡಲಾಗುತ್ತಿದೆ.

ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದಾರ್ಗ ಜಿಲ್ಲೆಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಲ್ಲೆಗಳ 1325 ಉತ್ಪಾದಕರ ಸಹಕಾರ ಸಂಘಗಳಿAದ ಪ್ರತಿನಿತ್ಯ 02 ಸರತಿಗಳಲ್ಲಿ ಸರಾಸರಿ 8 ಲಕ್ಷ ಕೆ.ಜಿ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಸದರಿ ಹಾಲನ್ನು ಅತ್ಯಾಧುನಿಕ ಯಂತ್ರಗಳಲ್ಲಿ ಸಂಸ್ಕರಿಸಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿರುವ 1836 ಹಾಲಿನ ಡೀಲರ್, 147 ಫ್ರಾಂಚೈಸಿ ಪಾರ್ಲರ್ ಹಾಗೂ 49 ಸ್ವಂತ ಪಾರ್ಲರ್‌ಗಳ ಮೂಲಕ ಪ್ರತಿನಿತ್ಯ 2.85 ಲಕ್ಷ ಲೀಟರ್ ಹಾಲು ಮತ್ತು ಸರಾಸರಿ 65 ಸಾವಿರ ಕೆ.ಜಿ. ಮೊಸರನ್ನು ಮಾರಾಟ ಮಾಡಲಾಗುತ್ತಿದೆ.

ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಸಿಹಿ ಹಾಗೂ ಖಾರಾ ಉತ್ಪನ್ನಗಳು ನಂದಿನಿ ಆಳ್ವಾ ಅಲ್ಲದೇ ಬ್ರೇಡ್, ಬನ್, ಐಸ್ ಕ್ರೀಂ ಸೇರಿದಂತೆ ಈಗಾಗಲೇ 150 ಕ್ಕೂ ಹೆಚ್ಚು ವಿವಿಧ ಉತ್ಪನ್ನಗಳನ್ನು ಕೆ.ಎಂ.ಎಫ್ ಹಾಗೂ ಹಾಲು ಒಕ್ಕೂಟಗಳಿಂದ ಮಾರಾಟ ಮಾಡಲಾಗುತ್ತಿದೆ.

ಈಗಾಗಲೇ ಶಿಮುಲ್ ವತಿಯಿಂದ 100 ಗ್ರಾಂ ಪ್ಯಾಕ್‌ನಲ್ಲಿ ಖೋವಾ ಕಡಲೇ ಮಿಠಾಯಿಯನ್ನು ಮಾರಾಟ ಮಾಡಲಾಗುತ್ತಿದ್ದು, ಅದರೊಂದಿಗೆ 12 ಗ್ರಾಂ (ರೂ.5/- ) ಹಾಗೂ 25 ಗ್ರಾಂ (ರೂ.10/-) ಪ್ಯಾಕ್‌ಗಳಲ್ಲಿ ಸಹ ಖೋವಾ ಕಡಲೆ ಮಿಠಾಯಿಯನ್ನು ಉತ್ಪಾದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಉತ್ಪನ್ನದ ಗುಣಮಟ್ಟದ ಬಗ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಜನಪ್ರಿಯತೆ ಹೊಂದಿರುವ ನಂದಿನಿ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿದ್ದು, ಈ ಸಾಲಿಗೆ ವಿಶ್ವ ಹಾಲು ದಿನದಂದು ನಂದಿನಿ ಕೇಕ್ ಮತ್ತು ಮಫೀನ್‌ಗಳು ಸೇರ್ಪಡೆಯಾಗುತ್ತಿದೆ. ಗ್ರಾಹಕರು ಎಂದಿನಂತೆ ನಂದಿನಿ ಉತ್ಪನ್ನಗಳನ್ನು ಬಳಸುವ ಮೂಲಕ ರೈತರ ಸಹಕಾರಿ ಸಂಸ್ಥೆ ಬೆಳವಣಿಗೆಗೆ ಸಹಕರಿಸಬೇಕೆಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಅವುಗಳ ದರ : ಸ್ಪಾಂಜಿ ವೆನಿಲ್ಲಾ ಕೇಕ್ 25 ಗ್ರಾಂ ಗೆ ರೂ.10/-, ಫ್ರೂಟಿ ಸ್ಲೈಸ್ ಕೇಕ್ 30 ಗ್ರಾಂ ಗೆ ರೂ.1/-5, ಚಾಕೋ ಕಿತ್ತಲೆ ಸ್ಲೈಸ್ ಕೇಕ್, ವೆನಿಲ್ಲಾ ಸ್ಲೈಸ್ ಕೇಕ್, ಅನಾನಸ್ ಸ್ಲೈಸ್ ಕೇಕ್ 50 ಗ್ರಾಂ ಗೆ ರೂ.15/- ರಿಂದ 20/-, ವೆನಿಲ್ಲಾ ಮಫಿನ್, ಚಾಕಲೇಟ್ ಮಫಿನ್, ಅನಾನಸ್ ಮಫಿನ್, ಸ್ಟ್ರಾಬೆರಿ ಮಫಿನ್, ಮಾವಾ ಮಫಿನ್ 150 ಗ್ರಾಂ ಗೆ ರೂ.50/-, ಪ್ಲಮ್ ಕೇಕ್, ಚಾಕೋ ವೆನಿಲ್ಲಾ ಕೇಕ್ , ಫ್ರೂಟ್ ಕೇಕ್, ವೆನಿಲ್ಲಾ ಕೇಕ್, ಚಾಕೊಲೇಟ್ ಕೇಕ್, ವಾಲ್ನಟ್ ಬನಾನಾ ಕೇಕ್, ಚಾಕಲೆಟ್ ಬೆಲ್ಲದ ಕೇಕ್ ಹಾಗೂ ಕೊಬ್ಬರಿ ಬೆಲ್ಲದ ಕೇಕ್ 200 ಗ್ರಾಂ ಗೆ ರೂ.110/- ದರವನ್ನು ನಿಗದಿಪಡಿಸಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ