Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಳಗೋಡು ಗ್ರಾಮ ಪಂಚಾಯಿತಿ: ಮಳೆ ನೀರು ಕೊಯ್ಲು, ಬೂದು ನೀರು ನಿರ್ವಹಣೆ ಕುರಿತು ತರಬೇತಿ

ಚಿತ್ರದುರ್ಗಜುಲೈ23:

ಚಿತ್ರದುರ್ಗ ತಾಲ್ಲೂಕಿನ ಯಳಗೋಡು ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಮಳೆ ನೀರು ಕೊಯ್ಲು, ಬೂದು ನೀರು ನಿರ್ವಹಣೆ ಕುರಿತು ತರಬೇತಿ ನಡೆಯಿತು.

ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಬಲ ಸಂಪನ್ಮೂಲ ಸಂಸ್ಥೆ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನಡೆಯಿತು.


ತರಬೇತಿ ಕಾರ್ಯಕ್ರಮದಲ್ಲಿ ಯಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ನಾಗರಾಜ್ ಮಾತನಾಡಿ, ಯಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ನಳಸಂಪರ್ಕ ಕಲ್ಪಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ 55 ಲೀಟರ್ ಶುದ್ಧ ಹಾಗೂ ಸುರಕ್ಷಿತ ನೀರು ಕೊಡಲಾಗುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ಆರ್.ಪ್ರಹ್ಲಾದ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯಿಂದ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ವಿವಿಧ ಘಟಕಾಂಶಗಳನ್ನು ಅನುನ ಮಾಡಲಾಗುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಇದರ ಬಗ್ಗೆ ಮಾಹಿತಿ ತಿಳಿದುಕೊಂಡು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಮಂಜುನಾಥ ಎಸ್. ನಾಡರ್ ಮಾತನಾಡಿ, ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಜಿಎಸ್.ನಾಗರಾಜ್ ಮತ್ತು ಗುರುಮೂರ್ತಿ ಅವರು ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜಪ್ಪ, ರುದ್ರೇಶ್, ಶಾಂತಕುಮಾರ್, ಪಾಲಯ್ಯ, ರೂಪಾ ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ನೀರುಗಂಟಿಗಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ