Ad image

ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ

Vijayanagara Vani
ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ

ಹೊಸಪೇಟೆ (ವಿಜಯನಗರ ಜಿಲ್ಲೆ) ಜುಲೈ 05 : ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಜುಲೈ 05ರಂದು ಅಧಿಕಾರ ಸ್ವೀಕರಿಸಿದರು.

- Advertisement -
Ad imageAd image


ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ ಅವರು ನೂತನ ಜಿಪಂ ಸಿಇಓ ಅವರಿಗೆ ಸ್ವಾಗತಿಸಿ, ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರ ಹಸ್ತಾಂತರಿಸಿದರು.
2020ರ ಬ್ಯಾಚ್ ನ ಕರ್ನಾಟಕ ಕೇಡರನ ಐಎಎಸ್ ಅಧಿಕಾರಿಯಾಗಿರುವ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ಮೂಲತಃ ಮಣಿಪುರ ರಾಜ್ಯದ ಇಂಪಾಲ್ ದವರಾಗಿದ್ದಾರೆ. ಕಂಪ್ಯೂಟರ್ ಸಾಯನ್ಸ್ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ. ಇವರು ಈ ಮೊದಲು ವಿಜಯನಗರ ಜಿಲ್ಲೆಯಲ್ಲಿ ಕಳೆದ 12 ತಿಂಗಳಿನಿಂದ ಹೊಸಪೇಟೆ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

Share This Article
error: Content is protected !!
";