ಹಾಸನ ಜೂನ್ 2: ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಮುಂಜಾಗ್ರತೆ ವಹಿಸಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳಾ ರಕ್ಷಣಾ ಸಮಿತಿಗಳ ಸಭೆ ನಡೆಸಿ ಮಾತನಾಡಿದ ಅವರು ಮಕ್ಕಳ ಸಹಾಯವಾಣಿಗೆ ಕರೆ ಬಂದ ತಕ್ಷಣ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು ನಿರ್ಲಕ್ಷ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
1098 ಗೆ ಕರೆ ಬಂದಿವೆ ಬಾಲ್ಯ ವಿವಾಹ ನಡೆಯುತ್ತಿದೆ ಎಂದು ದೂರುಗಳು ಸಮುದಾಯದ ಮುಖಂಡರುಗಳಿಗೆ ಅರಿವು ಮೂಡಿಸಿ ಬಾಲ್ಯ ವಿವಾಹ ನಡೆಯದಂತೆ ಗಮನಹರಿಸಿ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗಮನಹರಿಸಿ ಹೆಚ್ಚು ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಗುರುತಿಸಿ ಸ್ಥಳೀಯ ಸಮುದಾಯದ ಮುಖಂಡರುಗಳನ್ನು ಸೇರಿಸಿ ಅರಿವು ಮೂಡಿಸಲು ಕ್ರಮವಹಿಸಲು ಸೂಚಿಸಿದರು.
ಬಾಲ್ಯ ವಿವಾಹ ಮತ್ತಿತರ ವಿಷಯಗಳ ಬಗ್ಗೆ ಗಮನಹರಿಸಿ ಸೂಕ್ತವಾಗಿ ಕೆಲಸ ಮಾಡುತ್ತಿಲ್ಲ ದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಒಂದು ತಿಂಗಳ ವೇತನ ಕಡಿತಗೊಳಿಸಲು ಕ್ರಮವಹಿಸುವಂತೆ ಜಿಲ್ಲಾ ಮಕ್ಕಳಾ ರಕ್ಷಣಾ ಅಧಿಕಾರಿಗೆ ಸೂಚಿಸಿದರು.
ಪ್ರತ್ಯೇಕ ವಹಿಯಲ್ಲಿ ದಾಖಲಿಸಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ತಿಂಗಳು ಸಭೆ ನಡೆಸುವಂತೆ ನಿರ್ದೇಶನ ನೀಡಿರಲ್ಲದೆ ಬಾಲ್ಯ ವಿವಾಹ ಕುರಿತು ಪ್ರಕರಣ ದಾಖಲಾದ ನಂತರ ಇತ್ಯರ್ಥವಾಗುವವರೆಗೂ ಗಮನಹರಿಸುವಂತೆ ಸೂಚಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಎಚ್ಚರವಿರಲಿ ಬಾಲ್ಯ ವಿವಾಹವಾಗಿದ್ದಾರ ಎಂಬುದಾಗಿ ಪರಿಶೀಲನೆ ಮಾಡುವಂತೆ ಸೂಚಿಸಿದರು.
ಬಾಲ್ಯ ವಿವಾಹ, ಕಾಣೆಯಾದ ಮಕ್ಕಳು, ಭಿಕ್ಷಾಟನೆ, ಬಾಲ ಕಾರ್ಮಿಕರು ಹೀಗೆ ಪ್ರತಿಯೊಂದು ವಿಷಯಕ್ಕೆ ಸಂಬoಧಿಸಿದoತೆ ಪ್ರತ್ಯೇಕವಾಗಿ ವಹಿಯಲ್ಲಿ ದಾಖಲಿಸಿ ನಿರ್ವಹಣೆ ಮಾಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಸೂಚಿಸಿದರಲ್ಲದೆ, ಪ್ರತಿನಿತ್ಯ ಬಾಲಕರ ಬಾಲ ಮಂದಿರ ಹಾಗೂ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡುವಂತೆ ತಿಳಿಸಿದರು.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ ಪ್ರತಿಯೊಂದು ಮಗುವಿನ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ನಿರ್ದೇಶನ ನೀಡಿದರು.
ನಿರಂತರವಾಗಿ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕವಿಟ್ಟುಕೊoಡು ಎಲ್ಲೆಲ್ಲಿ ಹೆಚ್ಚು ಬಾಲ್ಯ ವಿವಾಹ ನಡೆಯುತ್ತಿವೆ ಅವುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಸೂಚನೆ ನೀಡಿದರು.
ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳ ಸಂರಕ್ಷಣೆ, ಮಕ್ಕಳ ಕಳ್ಳ ಸಾಗಣೆ ಮತ್ತಿತರ ವಿಷಯಗಳ ಕುರಿತು ಸಂಬoಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಅವರು ಮಾತನಾಡಿ ಬಾಲ್ಯ ವಿವಾಹ ತಡೆಗಟ್ಟಲು ಗ್ರಾಮೀಣ ಪ್ರದೇಶದಲ್ಲಿ ಅರಿವು ಮೂಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಸಮಿತಿ ಸದಸ್ಯರಾದ ರೂಪ ಹಾಸನ್ , ಕೆ.ಟಿ.ಜಯಶ್ರೀ, ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.