Ad image

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Vijayanagara Vani

ದಾವಣಗೆರೆ) ಮಾ.18: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
=====
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
ದಾವಣಗೆರ18:
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

Share This Article
error: Content is protected !!
";