ಯುವನಿಧಿ: ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ

Vijayanagara Vani
ಯುವನಿಧಿ: ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ
ಚಿತ್ರದುರ್ಗ
ಯುವನಿಧಿಗೆ ನೋಂದಾಯಿಸಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು 25ನೇ ತಾರೀಖಿನೊಳಗೆ ಸ್ವಯಂ ಘೋಷಣೆ ಸಲ್ಲಿಸಬೇಕು.
ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೊಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪಡೆಯಬೇಕಿದ್ದರೆ, ಪ್ರತಿ ತಿಂಗಳ 25 ನೇ ತಾರೀಖಿನೊಳಗೆ ತಾನು ನಿರುದ್ಯೋಗಿ, ವ್ಯಾಸಂಗ ಮಾಡುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗವಿಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಮಾರ್ಚ್, ಏಪ್ರಿಲ್, ಮೇ, ಜೂನ್ ತಿಂಗಳ ಸ್ವಯಂ ಘೋಷಣೆಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡದಿದ್ದಲ್ಲಿ, ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಸ್ವಯಂಪ್ರೇರಿತವಾಗಿ ಸ್ಥಗಿತಗೊಳ್ಳುತ್ತದೆ.
ಈಗಾಗಲೇ ನೊಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯಾಗಿದ್ದು, ಮುಂದಿನ ತಿಂಗಳು ಪ್ರಯೊಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು, ಎಸ್.ಎಂ.ಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗುತ್ತದೆ. ಹಾಗಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು ಎಂದು ಈ ಮೂಲಕ ತಿಳಿಸಲಾಗಿದೆ.
ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್ಸೈಟ್ ವೀಕ್ಷಿಸಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!