ಚಿತ್ರದುರ್ಗಜುಲೈ.12:
ಚಿತ್ರದುರ್ಗ ತಾಲ್ಲೂಕಿನ ಮಾಡನಾಯನಹಳ್ಳಿ ಗ್ರಾಮದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಎನ್ಎಸ್ಎಸ್ ವಾರ್ಷಿಕ ಶಿಬಿರಕ್ಕೆ ಚಾಲನೆ ನೀಡಲಾಯಿತು.
ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರವನ್ನು ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಸತ್ಯನಾರಾಯಣ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಡಾ.ಅಶೋಕ್ಕುಮಾರ್ ವಿ ಪಾಳೇದ, ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಪಿ.ಅನಿಲ್ ಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು, ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರದ ಎಲ್ಲಾ ಬೋಧಕ ಮತು ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳೊಂದಿಗೆ ನೇರವೇರಿಸಲಾಯಿತು.
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾ.ಬಿ.ಟಿ.ನಿವೇದಿತಾ, ಡಾ.ಎಂ.ಸುಂದರಂ ವಂದನಾರ್ಪಣೆ ನೆರವೇರಿಸಿದರು.