ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ ‘ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ’ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜ್ ಅಡಿ ಪ್ರತಿ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ.ಭಾರತ್ ಗೌರವ್ ದಕ್ಷಿಣ ಕ್ಷೇತ್ರ ಯಾತ್ರೆ ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಒಳಗೊಂಡಿದೆ. ವಿಶೇಷ ರೈಲುಗಳು 23/6/2024ರಂದು ಹೊರಟು 28/6/2024ಕ್ಕೆ ವಾಪಸ್ ಆಗಲಿವೆ. 1/7/2024ರಂದು ಹೊರಟು, 6/7/2024ಕ್ಕೆ ವಾಪಸ್ ಆಗಲಿವೆ.
ಈ ರೈಲುಗಳನ್ನು ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ ಮತ್ತು ಬೆಂಗಳೂರು ನಗರದ ಯಶವಂತಪುರದಲ್ಲಿ ಹತ್ತಬಹುದು/ ಇಳಿಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ಯಾಕೇಜ್ ಮೊತ್ತ: ‘ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ’ ಪ್ಯಾಕೇಜ್ ಒಟ್ಟು ಮೊತ್ತ 15,000 ರೂ.ಗಳು. ಕರ್ನಾಟಕ ಸರ್ಕಾರದಿಂದ ಸಹಾಯಧನ 5 ಸಾವಿರ ರೂ.ಗಳು. ಯಾತ್ರಿಕರು ಪಾವತಿ ಮಾಡಬೇಕಾದ ಮೊತ್ತ 10,000 ರೂ.ಗಳು. ಯಾತ್ರಾರ್ಥಿಗಳ ಆರೋಗ್ಯ ಹಾಗೂ ಕ್ಷೇಮದ ದೃಷ್ಟಿಯಿಂದ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ ‘ಸಿ’ ಅಧಿಸೂಚಿತ ದೇವಾಲಯ/ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ ನೌಕರರು ಮತ್ತು ಅವರ ಕುಟುಂಬದ ಒಬ್ಬ ಸದಸ್ಯರನ್ನು ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ ಯೋಜನೆಯಡಿ ಉಚಿತವಾಗಿ ಯಾತ್ರೆಗೆ ಕಳುಹಿಸಲಾಗುತ್ತದೆ.
ಈ ಯಾತ್ರೆಯಲ್ಲಿ ಸಂಚಾರ ನಡೆಸಲು ಜನರು ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8595931291, 8595931292, 8595931294 ಸಂಖ್ಯೆಗೆ ಸಂಪರ್ಕಿಸಬಹುದು. ದಕ್ಷಿಣ ಕ್ಷೇತ್ರಗಳ ಯಾತ್ರೆ ಪ್ಯಾಕೇಜ್ ವಿಶೇಷತೆಗಳು * ರಾಮೇಶ್ವರ- ರಾಮೇಶ್ವರ ದೇವಾಲಯ * ಕನ್ಯಾಕುಮಾರಿ – ಭಗವತಿ ದೇವಾಲಯ * ಮದು ರೈ- ಶ್ರೀ ಮೀನಾಕ್ಷಿ ದೇವಾಲಯ * ತಿರುವನಂತಪುರಂ – ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯ ದರ್ಶನ 2022ರ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಈ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕವಾಗಿತ್ತು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.
ಈ ಯಾತ್ರೆ ಯಶಸ್ಸಿನ ಬಳಿಕ ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ ‘ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ’ಯ ವಿವಿಧ ಪ್ಯಾಕೇಜ್ ಘೋಷಣೆ ಮಾಡಿತು. ಪ್ಯಾಕೇಜ್ ಅಡಿ ಯಾತ್ರಾರ್ಥಿಗಳಿಗೆ ಸಹಾಯಧನ ಘೋಷಣೆ ಮಾಡಲಾಗಿದೆ.