Ad image

ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗೆ ಬನ್ನಿ, ಇಲ್ಲ ಶಿಸ್ತು ಕ್ರಮ ಎದುರಿಸಿ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್. ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಖಡಕ್ ವಾರ್ನಿಂಗ್. ಗ್ಯಾರಂಟಿ    ಯೋಜನೆಗಳಿಂದ ಜನರಿಗೆ ಹೆಚ್ಚಿನ ಲಾಭ, ವಿದ್ಯಾರ್ಥಿಗಳ ಬಸ್ ಸಮಸ್ಯೆ ನಿವಾರಣೆಗೆ ಕ್ರಮ.

Vijayanagara Vani
ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗೆ ಬನ್ನಿ, ಇಲ್ಲ ಶಿಸ್ತು ಕ್ರಮ ಎದುರಿಸಿ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್. ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಖಡಕ್ ವಾರ್ನಿಂಗ್. ಗ್ಯಾರಂಟಿ    ಯೋಜನೆಗಳಿಂದ ಜನರಿಗೆ ಹೆಚ್ಚಿನ ಲಾಭ, ವಿದ್ಯಾರ್ಥಿಗಳ ಬಸ್ ಸಮಸ್ಯೆ ನಿವಾರಣೆಗೆ ಕ್ರಮ.

ವಿಜಯನಗರ(ಹೊಸಪೇಟೆ), ಸೆ.27: ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸಾಕಷ್ಟು ಸುಧಾರಣೆಯಾಗಿದೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್‌ಗಳ ಕೊರತೆಯಿಂದ ಇತರೆ ವಾಹನಗಳನ್ನು ಅವಲಂಬಿಸಬೇಕಾಗಿದ್ದು, ಸಾರಿಗೆ ಸಚಿವರೊಂದಿಗೆ ಚರ್ಚಿಸಿ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೆöÊಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶನಿವಾರ ಅವರು ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳಿಂದ ಅನೇಕ ಯಶೋಗಾಥೆಗಳನ್ನು ಕಾಣಬಹುದಾಗಿದೆ. ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯಿಂದ ಪರಿಶೀಲನೆ ನಡೆಸಿ ಕುಂದುಕೊರತೆಗಳನ್ನು ನಿವಾರಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಸಂಸದರಾದ ಈ.ತುಕಾರಾಮ್ ರವರು ಪ್ರಸ್ತಾಪಿಸಿ ವಿವಿಧ ಮಾರ್ಗಗಳಲ್ಲಿ ಶಾಲೆಗೆ ಬರುವ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನು ತಯಾರಿಸಿ ಹೆಚ್ಚಿನ ಬೇಡಿಕೆ ಇರುವ ಸಮಯ ಮತ್ತು ಮಾರ್ಗಗಳಲ್ಲಿ ಬಸ್ ಸಂಚರಿಸಲು ಡಿಡಿಪಿಐ ಮತ್ತು ಕೆಕೆಆರ್‌ಟಿಸಿ ಡಿಸಿ ಕ್ರಮ ವಹಿಸಬೇಕೆಂದಾಗ, ಮುಂದಿನ ಸಭೆಗೆ ಡಿಡಿಪಿಐಗೆ ಎಲ್ಲಾ ವಿವರ ಸಲ್ಲಿಸಲು ಸಚಿವರು ಸೂಚನೆ ನೀಡಿದರು.
ಪೋಕ್ಸೋ ತಡೆಗೆ ಜಾಗೃತಿ : ಹಾಸ್ಟೆಲ್ ಸೇರಿದಂತೆ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಲ್ಲಿ ಪೋಕ್ಸೋ ತಡೆಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಇತರೆ ಜಿಲ್ಲೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿ ಬಾಲಗರ್ಭಿಣಿಯಾದ ಬಗ್ಗೆ ವರದಿಯಾಗಿದ್ದು, ಜಿಲ್ಲೆಯ ಎಲ್ಲಾ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಕಳುಹಿಸುವಾಗ ಕಡ್ಡಾಯವಾಗಿ ಪೋಷಕರ ಅನುಮತಿ ಪಡೆದುಕೊಳ್ಳಬೇಕೆಂಬ ನಿಯಮ ಜಾರಿಗೆ ತರಲು ಸೂಚನೆ ನೀಡಿದರು.
ಆರ್.ಓ ಅಳವಡಿಕೆಗೆ ಸೂಚನೆ : ಜಿಲ್ಲೆಯಲ್ಲಿನ ಎಲ್ಲಾ ಇಲಾಖೆಗಳ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳಲ್ಲಿ ಕಡ್ಡಾಯವಾಗಿ ಆರ್.ಓ ಅಳವಡಿಸುವ ಮೂಲಕ ಶುದ್ದ ಕುಡಿಯುವ ನೀರನ್ನು ಒದಗಿಸಬೇಕು. ಅನೇಕ ಹಾಸ್ಟೆಲ್ ಗಳಲ್ಲಿ ಆರ್‌ಓಗಳು ಇಲ್ಲದೇ ವಿದ್ಯಾರ್ಥಿಗಳು ನೇರವಾಗಿ ಶುದ್ಧಿಕರಿಸದ ನೀರು ಕುಡಿಯುವಂತಾಗಿದೆ. ಇದರಿಂದ ಹೃದ್ರೋಗ, ಪಿತ್ತಜನಕಾಂಗ ಸೇರಿದಂತೆ ಇನ್ನಿತರೆ ಕಾಯಿಲೆಗೆ ತುತ್ತಾಗಿ ದೇಶದ ಅಭಿವೃದ್ಧಿಗೆ ಬೇಕಾದ ಮಾನವಸಂಪನ್ಮೂಲ ನಷ್ಟವಾಗುತ್ತದೆ. ಆದ್ದರಿಂದ ಆರ್‌ಓ ಅಳವಡಿಕೆಗೆ ಮೊದಲ ಆದ್ಯತೆ ನೀಡಲು ಸೂಚಿಸಿದರು. ಇದಕ್ಕೆ ಸಂಸದರು ಹಾಗೂ ಶಾಸಕರು ದನಿಗೂಡಿಸಿದರು.
ಬೆಳೆ ನಷ್ಟ : ಜಿಲ್ಲೆಯಲ್ಲಿ ಮುಂಗಾರಿನಿAದಲೂ ಉತ್ತಮ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ರೈತರ ಬೆಳೆ ನಷ್ಟವಾಗಿದೆ. ಅದರಲ್ಲಿ ಈರುಳ್ಳಿ ಬೆಳೆ ಹಡಗಲಿ ಮತ್ತು ಹರಪನಹಳ್ಳಿ ತಾಲೂಕಿನಲ್ಲಿ ಹೆಚ್ಚಿನ ನಷ್ಟವಾಗಿದ್ದು ರೈತರು ಕಂಗಲಾಗಿದ್ದಾರೆ ಎಂದು ಕೃಷ್ಣನಾಯ್ಕ ಮತ್ತು ಎಂ.ಪಿ.ಲತಾ ಮಲ್ಲಿಕಾರ್ಜುನ ಪ್ರಸ್ತಾಪಿಸಿದರು. ಇದಕ್ಕೆ ಸಚಿವರು ನಿಖರವಾದ ಅಂಕಿ ಅಂಶಗಳನ್ನು ಸಂಗ್ರಹಿಸಲು ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು.
ನೀಟ್ ಪ್ರವೇಶಕ್ಕೆ ಯುಡಿಐಡಿ ಸುಳ್ಳು ದಾಖಲೆ ಸೃಷ್ಟಿ : ಬೆಂಗಳೂರಿನವರು ಹಗರಿಬೊಮ್ಮನಹಳ್ಳಿ ವಿಳಾಸದಲ್ಲಿ ಆಧಾರ್ ಬದಲಿಸಿ ಮೆಡಿಕಲ್ ಸೀಟ್ ಪಡೆಯಲು ಆರೋಗ್ಯ ಇಲಾಖೆ ಕ್ಲಾರ್ಕ್ ಮತ್ತು ವೈದ್ಯರು ಸೇರಿ ಸುಳ್ಳು ದಾಖಲೆ ಸೃಷ್ಟಿಸಿ ಅಂಗವಿಕಲರ ಪ್ರಮಾಣ ಪತ್ರ ವಿತರಣೆ ಮಾಡಿದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಹಿಂದೆ ದೊಡ್ಡ ಜಾಲವಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಚಿವರು ಸೂಚಿಸಿದರು. ಇದಕ್ಕೆ ಪೂರಕ ಮಾಹಿತಿ ನೀಡಿದ ಡಿಎಚ್‌ಒ ಈಗಾಗಲೇ ವೈದ್ಯರು ಮತ್ತು ಸಿಬ್ಬಂದಿಗೆ ನೊಟೀಸ್ ನೀಡಲಾಗಿದೆ. ಸರ್ಕಾರಕ್ಕೆ 206 ಪುಟಗಳ ವರದಿ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಕಾನೂನು ಸುವ್ಯವಸ್ಥೆಗೆ ಸೂಚನೆ : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜತೆಗೆ ಜೂಜೂ ಅಡ್ಡೆಗಳನ್ನು ಬೇರು ಸಮೇತ ಕಿತ್ತೆಯೆಸಯಬೇಕು. ಜೂಜೂ ಮತ್ತು ಮೋಜಿನ ಕೂಟಗಳಿಗೆ ಅಹ್ವಾನಿಸಿ ಜನರಿಂದ ಸಾಕಷ್ಟು ಹಣವನ್ನು ಕಿತ್ತುಕೊಳ್ಳುತ್ತಿರುವ ಮಾಹಿತಿ ಇದೆ. ಅಂತಹ ಯಾವುದೇ ವ್ಯಕ್ತಿಗಳನ್ನು ಬಿಡಬಾರದು. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಶಾಸಕರು ಪ್ರಸ್ತಾಪಿಸಿದರು. ಇದಕ್ಕೆ ಸಚಿವರು ಪ್ರತಿಕ್ರಿಯಿಸಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾರುವವರ ವಿರುದ್ಧ ಅಬಕಾರಿ ಇಲಾಖೆ ಅಲ್ಲದೇ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಗೆ ಸಾಕಷ್ಟು ವೇಗ ನೀಡಲು ಮಾನ್ಯ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ. ಆರಂಭದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆ ಉಂಟಾಗಿ ನಿಧಾನಗತಿಯಲ್ಲಿ ಸಾಗಿತ್ತು. ಸಮೀಕ್ಷೆಗೆ ಕೆಲವು ಸಡಿಲಿಕೆಗಳನ್ನು ನೀಡಿದ್ದು, ಇಕೆವೈಸಿ ಬದಲಾಗಿ ಸ್ವಯಂಘೋಷಣೆ, ಪಡಿತರ ಚೀಟಿ ಅಥವಾ ಅಧಾರ ಕಾರ್ಡ್ ಪಡೆಯಲು ಮತ್ತು ಮನೆಯಲ್ಲಿ ಎಲ್ಲಾ ಸದಸ್ಯರು ಇರಬೇಕೆಂಬುದನ್ನು ವಿನಾಯಿತಿ ನೀಡಿದೆ. ಮನೆಯ ಸದಸ್ಯರು ಎಲ್ಲಾರ ಮಾಹಿತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ವಿಜಯನಗರ ಜಿಲ್ಲೆ ರಾಜ್ಯದಲ್ಲಿ ಸಮೀಕ್ಷಾ ರ‍್ಯಾಂಕಿಂಗ್‌ನಲ್ಲಿ 21 ನೇ ಸ್ಥಾನದಲ್ಲಿದ್ದು, ಇನ್ನೆರಡು ದಿನಗಳಲ್ಲಿ ಇದಕ್ಕೆ ಸಾಕಷ್ಟು ವೇಗ ಸಿಗಲಿದೆ ಎಂದ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲು ಸೂಚನೆ ನೀಡಿದರು.
ಈ ವೇಳೆ ಸಭೆಯಲ್ಲಿ ಸಂಸದರಾದ ಈ.ತುಕಾರಾಮ್, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜನಾಯ್ಕ, ಹಡಗಲಿ ಶಾಸಕ ಕೃಷ್ಣನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೆಂದ್ರಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share This Article
error: Content is protected !!
";