ಬಳ್ಳಾರಿ,ಆ.29
ಜಿಲ್ಲಾ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ವತಿಯಿಂದ ಆ.30 ಮತ್ತು 31 ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆಯನ್ನು ನಡೆಸಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ.ಪ್ರಕಾಶ್ ಎಸ್ ಪುಣ್ಯಶೆಟ್ಟಿ ಅವರು ತಿಳಿಸಿದ್ದಾರೆ.
ಆಹಾರ ಸುರಕ್ಷತೆ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲಿಸಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹಾಗೂ ಹೋಟೆಲ್, ರೆಸ್ಟೋರೆಂಟ್ ಆಹಾರ ಉದ್ದಿಮೆದಾರರಿಗೆ ಜಾಗೃತಿ ಅರಿವು ಮೂಡಿಸಲಾಗುವುದು ಮತ್ತು ಮಾಂಸ, ಮೀನು, ಮೊಟ್ಟೆಗಳ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಲಾಗುವುದು.
ಆಹಾರ ಉದ್ದಿಮೆದಾರರು ಸ್ವಚ್ಛತೆ ಹಾಗೂ ನೈರ್ಮಲ್ಯತೆ ಕಾಪಾಡಿಕೊಳ್ಳುವುದರ ಬಗ್ಗೆ ಜೊತೆಗೆ ಐಇಸಿ ಚಟುವಟಿಕೆಗಳ ಮೂಲಕ ಆಹಾರ ಉದ್ದಿಮೆದಾರರಿಗೆ ನೋಂದಣಿ ಅಥವಾ ಪರವಾನಿಗೆ ಆಂದೋಲವನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.