ಬಳ್ಳಾರಿ,ಜು.25
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೀಡ್ಸ್ ಸಂಸ್ಥೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಅರಣ್ಯ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜು.26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ನ್ಯಾಯಾಲಯದ ವಿಸಿ ಸಭಾಂಗಣದಲ್ಲಿ “ಮಕ್ಕಳ ರಕ್ಷಣೆಗೆ ಕಾನೂನುಗಳು” ಪುಸ್ತಕ ಬಿಡುಗಡೆ ಸಮಾರಂಭ ಹಾಗೂ ಮಗುವಿಗೊಂದು ಮರ ಶಾಲೆಗೊಂದು ವನ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ ಶಾಂತಿ ಅವರು ಪುಸ್ತಕ ಬಿಡುಗಡೆ ಮತ್ತು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಕೆ.ಎನ್ ಬಸವರಾಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ರೀಡ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ.ಹೆಚ್.ಸಿ.ರಾಘವೇಂದ್ರ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಜನಾರ್ದನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಉಮಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಚಂದ್ರಕಾAತ ನಂದಾರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮÃ ಮೈದೂರು, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ಧಪ್ಪ.ಜಿ ಕೈನೂರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿ.ಆರ್.ಸಿ., ಸಿ.ಆರ್.ಸಿ ಇ.ಸಿ.ಓ, ಕಾರ್ಮಿಕ ಅಧಿಕಾರಿಗಳು, ಪಿ.ಡಿ-ಎನ್.ಸಿ.ಎಲ್.ಪಿ, ಮಕ್ಕಳ ವಿಶೇಷ ಪೊಲೀಸ್ ಘಟಕ ಸಿಬ್ಬಂಧಿಗಳು, ಡಿ.ಸಿ.ಪಿ.ಓ ಸಿಬ್ಬಂದಿಗಳು, ಚೈಲ್ಡ್ ಲೈನ್ ಸಿಬ್ಬಂಧಿಗಳು, ಅಂಗನವಾಡಿ ಮೇಲ್ವಿಚಾರಕರು, ಪ್ಯಾರಾ ಲೀಗಲ್ ವಾಲೆಂಟೀಯರ್ಸ್, ಎಲ್ಲಾ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳು, ರೀಡ್ಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.