ಬಳ್ಳಾರಿ,ಮಾ.10
ಜಿಲ್ಲೆಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ಪ್ರವಾಸ ಕೈಗೊಂಡಿದ್ದು, ಮಾ.12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಅಲೆಮಾರಿ ಸಮುದಾಯದ ಸಾಮಾನ್ಯ ಜನರಿಂದ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ ಮಾಡುವರು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಅನುಷ್ಟಾನ ಸಮಿತಿಯ ಸದಸ್ಯರು, ಸದಸ್ಯಕಾರ್ಯದರ್ಶಿಗಳು ಹಾಗೂ ಸಂಬAಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರು, ಸಾರ್ವಜನಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ಮಾ.12 ರಂದು ಬೆಳಿಗ್ಗೆ 10:00 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿರುವ ಕುಂದು-ಕೊರತೆಗಳ ಆಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.