ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

Vijayanagara Vani
ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ
ಶಿವಮೊಗ್ಗ, 
ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಆಚರಿಸಲಾಗುವುದು. ಜಯಂತಿಯು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬoಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಡಿ.ದೇವರಾಜ ಅರುಸುರವರ ಜನ್ಮ ದಿನಾಚರಣೆ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಆಹ್ವಾನಿಸಲು ಸೂಚಿಸಿದ ಅವರು, ಡಿ.ದೇವರಾಜ ಅರಸು ಮತ್ತು ಶ್ರೀ ನಾರಾಯಣ ಗುರುರವರ ಜಯಂತಿಗಳು ಒಂದೇ ದಿನ ಇರುವ ಕಾರಣ ವಿವಿಧ ಸಂಘಟನೆಗಳು ತಮ್ಮ ಪೂರ್ವಭಾವಿ ಸಭೆ ಮುಗಿದ ಬಳಿಕೆ ಎಲ್ಲಿ ಮತ್ತು ಯಾವ ಸಮಯದಲ್ಲಿ ಜಯಂತಿಗಳನ್ನು ಆಚರಿಸಬೇಕೆಂದು ಸಲಹೆ ನೀಡುವಂತೆ ತಿಳಿಸಿದರು. ಹಾಗೂ ಮುಖಂಡರು ಉಲ್ಲೇಖಿಸಿದ ಉಪನ್ಯಾಸಕರಿಂದ ಅರಸುವರವ ಕುರಿತು ಉಪನ್ಯಾಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.
ದಲಿತ ಸಂಘಟನೆ ಮತ್ತು ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಎಲ್ಲ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಳು, ಸಂಘಟನೆಗಳ ಸಹಯೋಗ ಮತ್ತು ಸಮನ್ವಯತೆಯಿಂದ ಅರಸುರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಮನವಿ ಮಾಡಿದರು. ಡಿ.ದೇವರಾಜ ಅರಸುರವರು ಮತ್ತು ಶ್ರೀ ನಾರಾಯಣ ಗುರುರವರ ಜಯಂತಿಗಳು ಒಂದೇ ದಿನ ಇರುವ ಕಾರಣ ಒಂದೇ ವೇದಿಕೆಯಲ್ಲಿ ಎರಡು ಜಯಂತಿಗಳನ್ನು ಆಚರಿಸಬಹುದು ಎಂದು ಸಲಹೆ ನೀಡಿದರು.
2023-24 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ/ಪಿಯುಸಿ/ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ನಿಯಲಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವಂತೆ ಹಾಗೂ ಹಿಂದುಳಿದ ವರ್ಗಗಳ ಏಳ್ಗೆಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವಂತೆ ಮನವಿ ಮಾಡಿದರು.
ಹಾಗೂ ಅರ್ಧಕ್ಕೆ ನಿಂತಿರುವ ಡಿ.ದೇವರಾಜ ಅರಸು ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ತರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅರಸುರವರ ಕುರಿತಾದ ಕಿರು ಪುಸ್ತಕಗಳನ್ನು ವಿತರಿಸುವಂತೆ ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ ಮಾತನಾಡಿ, ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ, ಜಯಂತಿಯ0ದು ಬಹುಮಾನ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿಗಳು, ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಹಿಂದುಳಿದ ವರ್ಗಗಳಿಗಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುವುದು. ಹಾಗೂ ಒಂದೇ ವೇದಿಕೆಯನ್ನು ಅರಸು ಮತ್ತು ನಾರಾಯಣ ಗುರು ಜಯಂತಿ ಆಚರಣೆ ಮಾಡಿದರೆ ಸೂಕ್ತ. ಮಳೆ ಬೀಳುತ್ತಿರುವುದರಿಂದ ಮೆರವಣಿಗೆ ಕುರಿತು ನಂತರ ನಿರ್ಧಾರ ಮಾಡೋಣ ಎಂದ ಅವರು ಎಲ್ಲರೂ ಸೇರಿ ಜಯಂತಿಯನ್ನು ಯಶಸ್ವಿಯಾಗಿಸೋಣ. ಅದಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರಾದ ಬಿ.ರಾಜು, ಶ್ರೀಧರ್, ಎಸ್ ಪಿ ಶೇಷಾದ್ರಿ, ರಾಜ್‌ಕುಮಾರ್, ವೆಂಕಟೇಶ್, ಏಳುಕೋಟಿ, ಮೂರ್ತಿ, ಷಣ್ಮುಗಂ, ರವಿಕುಮಾರ್, ವಿಜಯಕುಮಾರ್, ಮಹಾಲಿಂಗಪ್ಪ, ಲೋಕೇಶ್, ಹನುಮಂತಪ್ಪ, ಚನ್ನವೀರಪ್ಪ, ಪ್ರಕಾಶ್ ಇತರರು ಹಾಜರಿದ್ದರು
WhatsApp Group Join Now
Telegram Group Join Now
Share This Article
error: Content is protected !!