Ad image

ಅ.13 ರಂದು ಸಂಸದರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Vijayanagara Vani
ಅ.13 ರಂದು ಸಂಸದರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

 

ಬಳ್ಳಾರಿ,ಅ.11
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರಾದ ಈ.ತುಕಾರಾಮ್ ಅವರು ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಅ.13 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಅಹವಾಲುಗಳಿರುವ ಸಾರ್ವಜನಿಕರು ಲಿಖಿತವಾಗಿ ಸಲ್ಲಿಸಬಹುದು.
ನಂತರ ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯನ್ನು ನಡೆಸಲು ನಿಗದಿಪಡಿಸಲಾಗಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
-————

Share This Article
error: Content is protected !!
";