ಬಳ್ಳಾರಿ,ಏ.04
ಜಿಲ್ಲಾಡಳಿತದಿಂದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮವನ್ನು ಏ.05 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಡಾ.ಬಾಬು ಜಗಜೀವನ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರ, ಸ್ತಬ್ಧಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ-ಬ್ರೂಸ್‌ಪೇಟೆ ಠಾಣೆ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿಬರಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಕೋರಿದ್ದಾರೆ