ಆ.04 ರಂದು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ

Vijayanagara Vani
ಆ.04 ರಂದು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ
ಬಳ್ಳಾರಿ,ಆ.03
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ನ್ಯಾಯಾಧೀಶರಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆ.04 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪಾರ್ವತಿ ನಗರದಲ್ಲಿನ ಪೊಲೀಸ್ ಜಿಮ್‌ಖಾನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ಜ್ಯೋತಿ ಮೂಲಿಮನಿ ಅವರು ಶಿಬಿರ ಉದ್ಘಾಟಿಸುವರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ ಶಾಂತಿ ಅವರು ಅಧ್ಯಕ್ಷತೆ ವಹಿಸುವರು.
ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿ.ಚಂದ್ರಶೇಖರ್, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ತರಬೇತುದಾರರಾದ ಸುಧಾ.ಎಸ್.ಎನ್., ಶ್ರೀಕುಮಾರ್.ಬಿ ಸೇರಿದಂತೆ ಇತರರು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!