ಬಳ್ಳಾರಿ,ಜು.10
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ‘ಮಕ್ಕಳ ರಕ್ಷಣಾ ನೀತಿ 2016 (ಪರಿಷ್ಕರಣೆ-2023), ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ’ ಕುರಿತು ಜು.11 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ವಸತಿ ನಿಲಯಗಳ ನಿಲಯಪಾಲಕರಿಗೆ, ನಿಲಯ ಮೇಲ್ವಿಚಾರಕರು, ವಸತಿ ಶಾಲೆಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಕರು ಹಾಗೂ ವಾರ್ಡನ್ರವರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕೊಪ್ಪಳದ ಯುನಿಸೆಫ್ನ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ., ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಕೆ.ಎಸ್., ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ವಿಠೋಬ ಹೊನಕಾಂಡೆ, ಮಕ್ಕಳ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ ಎ.ಕೆ ಹಾಗೂ ಇತರರು ಉಪಸ್ಥಿ