ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ ) ಉಚಿತ ಪ್ರವೇಶಾಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ, ಇತರೆ ವರ್ಗದ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://shp.Karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರಕ್ಕಾಗಿ ಇಲಾಖೆಯ ವೆಬ್ ಸೈಟ್ https://dom.Karnataka.gov.in/bengaluru rural/public ಅನ್ನು ವೀಕ್ಷಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಹಾಗೂ ಈ ಕೆಳಕಂಡ ತಾಲ್ಲೂಕು ನಿಲಯಪಾಲಕರನ್ನು ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು- ರಾಧಾಮಣಿ 9886400832,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಜಯನಗರ, ನೆಲಮಂಗಲ ತಾಲ್ಲೂಕು- ಕೃಷ್ಣ.ಎಂ.ಆರ್ 8317403213, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ದಂಡುಪಾಳ್ಯ ಹೊಸಕೋಟೆ ತಾಲ್ಲೂಕು- ಅಕ್ರಂ ಪಾಷ 8310397004,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು- ತಿಪ್ಪೇಸ್ವಾಮಿ ಎನ್. 9731017483 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.