*ಧಾರವಾಡ () ಜು.10:* 2025-26ನೇ ಸಾಲಿಗೆ ಧಾರವಾಡ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ನೀಡುವ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಹೊಸದಾಗಿ ನೋಂದಾಯಿಸಿಕೊಳ್ಳಲು ಜುಲೈ 25, 2025 ರವರೆಗೆ ಅವಕಾಶ ನೀಡಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836 – 2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.