Ad image

ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಲು ಸೂಚನೆ

Vijayanagara Vani
ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಲು ಸೂಚನೆ

ಬಳ್ಳಾರಿ,ನ.12

- Advertisement -
Ad imageAd image

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ತಿಳಿಸಿದ್ದಾರೆ.
ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು.
95-ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದ್ದಲ್ಲಿ ಸಂಬಳದ ಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";