ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಪಾಲ್ಗೊಂಡು ಬಾಕಿ ಇರುವ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳಿ: ನ್ಯಾ.ಕೆ.ಜಿ ಶಾಂತಿ

Vijayanagara Vani

ಬಳ್ಳಾರಿ,ಆ.24

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನುನ ಸೇವೆಗಳ ಪ್ರಾಧಿಕಾರ ವತಿಯಿಂದ ಇದೇ ಸೆ.14 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಬಾಕಿ ಇರುವ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ ಶಾಂತಿ ಅವರು ಕರೆ ನೀಡಿದರು.

ನಗರದ ತಾಳೂರು ರಸ್ತೆಯ ನೂತನ ನ್ಯಾಯಾಲಯದ ಸಂಕೀರ್ಣದ ವಿಸಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ತ್ವರಿತ ನ್ಯಾಯಕ್ಕಾಗಿ ಕಕ್ಷಿದಾರರು ಮುತುವರ್ಜಿ ವಹಿಸಿಕೊಂಡು, “ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಭಾಗವಹಿಸಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಂಡು ಸಾಮರಸ್ಯ ಜೀವನ ನಡೆಸಬೇಕು ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಬಹುದಾದ ಅಪರಾಧಿಕ ಪ್ರಕರಣ, ಚೆಕ್ ಬೌನ್ಸ್ ಪ್ರಕರಣ, ಬ್ಯಾಂಕ್ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣ, ವೈವಾಹಿಕ, ಕೌಟುಂಬಿಕ ಪ್ರಕರಣ, ಸಿವಿಲ್ ಪ್ರಕರಣ ಸೇರಿದಂತೆ ಇನ್ನಿತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಮೆಗಾ-ಲೋಕ್ ಅದಾಲತ್‌ನಲ್ಲಿ ಬಗೆಹರಿಸಲಾಗಲಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿನ 31 ನ್ಯಾಯಾಲಯಗಳಲ್ಲಿ 59,434 ಪ್ರಕರಣಗಳು ಬಾಕಿಯಿದ್ದು, 4,109 ಪ್ರಕರಣಗಳು ರಾಜಿ ಸಂಧಾನ ಮೂಲಕ ಬಗೆಹರಿಸಬಹುದು ಎಂದು ಗುರುತಿಸಲಾಗಿದೆ. ಅವುಗಳಲ್ಲಿ 905 ಪ್ರಕರಣಗಳು ರಾಜಿ ಸಂಧಾನದ ಮೂಲಕ ವಿಮುಕ್ತಗೊಳಿಸಲಾಗಿದೆ, ಇನ್ನುಳಿದ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಬಗೆಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್‌ಗೆ ಸಂಬ0ಧಿಸಿದ0ತೆ ನ್ಯಾಯಾಧೀಶರ ಮತ್ತು ನ್ಯಾಯಾವಾಧಿ ಸಮಾಧಾನಕಾರರ ಸಮ್ಮುಖದಲ್ಲಿ ಕಾಳಜಿ ನ್ಯಾಯಾಲಯದ ಅಧಿಕಾರಿಗಳು ಮತ್ತು ಸಂಧಾನಕರರು ಕಕ್ಷಿದಾರರ ಮನವೊಲಿಸಿ ಪ್ರಕರಣಗಳನ್ನು ರಾಜಿಗೆ ತೆಗದುಕೊಳ್ಳುತ್ತಿದ್ದು, ಸಾರ್ವಜನಿಕರು ಪೂರ್ವಭಾವಿ ಬೈಠಕ್‌ಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ತಿಳಿಸಿದರು.

ಕಳೆದ “ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, 1,13,540 ವ್ಯಾಜ್ಯಪೂರ್ವ ಪ್ರಕರಣ ಮತ್ತು 11,902 ಬಾಕಿ ಪ್ರಕರಣ ಸೇರಿದಂತೆ ಒಟ್ಟು 1,25,442 ಪ್ರಕರಣಗಳಲ್ಲಿ 74,00,54,519 ರೂ. ಪರಿಹಾರ ಒದಗಿಸಲಾಗಿದ್ದು, ಮುಂಬರುವ ರಾಷ್ಟ್ರೀಯ ಲೊಕ್ ಅದಾಲತ್”ನಲ್ಲಿ ಹೆಚ್ಚಿನ ಗುರಿ ಸಾಧಿಸುವ ಛಲ ಹೊಂದಲಾಗಿದೆ ಎಂದೂ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದ ರಾಜೇಶ್ ಎನ್.ಹೊಸಮನೆ ಅವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!