ಪ್ಲಾಸ್ಟಿಕ್ ಮುಕ್ತವಾಗಿ ಸ್ವಾತಂತ್ರ್ಯಯ ದಿನಾಚರಣೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯ

Vijayanagara Vani
ಪ್ಲಾಸ್ಟಿಕ್ ಮುಕ್ತವಾಗಿ ಸ್ವಾತಂತ್ರ್ಯಯ ದಿನಾಚರಣೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯ

ಕಾರವಾರ. ಆ.2 ಆಗಸ್ಟ್ 15 ರಂದು ಆಚರಿಸುವ ಸ್ವಾತಂತ್ರ್ಯಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಯಾವುದೇ ಸರ್ಕಾರಿ ಸಮಾರಂಭಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಆಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರಿಕೆ ವಹಿಸಿ ಪ್ಲಾಸ್ಟಿಕ್ ಮುಕ್ತ ಸ್ವಾತಂತ್ರ್ಯಯ ದಿನಾಚರಣೆ ಆಚರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾತಂತ್ರ್ಯಯ ದಿನಾಚರಣೆ ಆಯೋಜನೆಯ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ಬ್ಯಾನರ್, ಪ್ಲಾಸ್ಟಿಕ್ ರಾಷ್ಟçಧ್ವಜ ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್ನಿಂದ ತಯಾರಿಸಿದ ಯಾವುದೇ ರೀತಿಯ ವಸ್ತುಗಳನ್ನು ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಪರಿಸರ ಸ್ನೇಹಿಯಾಗಿ, ಅರ್ಥಪೂರ್ಣವಾಗಿ ಸ್ವಾತಂತ್ರ್ಯಯ ದಿನಾಚರಣೆಯನ್ನು ಆಚರಿಸುವಂತೆ ತಿಳಿಸಿದರು.

ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಕಾರವಾರದ ಪೊಲೀಸ್ ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯಯ ದಿನಾಚರಣೆ ಕಾರ್ಯಕ್ರಮ ಆಯೋಜನೆಗೆ ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪ್ರಸ್ತುತ ಮಳೆಗಾಲ ಆಗಿರುವ ಕಾರಣ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಾಟರ್ ಪ್ರೂಫ್ ಶಾಮಿಯಾನ ಅಳವಡಿಸುವಂತೆ ಹಾಗೂ ಅತಿಥಿ ಗಣ್ಯರಿಗೆ, ಸಾರ್ವಜನಿಕರಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯಯ ದಿನಾಚರಣೆ ಕಾರ್ಯಕ್ರಮದ ಕುರಿತು ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ತಲುಪಿಸಬೇಕು. ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು. ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿ0ದ ಆಕರ್ಷಕ ಪಥ ಸಂಚಲನ ಏರ್ಪಡಿಸುವಂತೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.

ಆಗಸ್ಟ್ 14 ರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು, ಎಲ್ಲಾ ಇಲಾಖೆಗಳ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ, ಪೊಲೀಸ್ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಗೈರು ಹಾಜರಾಗುವವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಸ್ವಾತಂತ್ರ್ಯಯ ದಿನಾಚರಣೆ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು, ಸಮಿತಿಯ ಎಲ್ಲಾ ಅಧಿಕಾರಿಗಳು ಮತ್ತು ಸದಸ್ಯರು ಪರಸ್ಪರ ಸಮನ್ವಯದಿಂದ ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಚಾಚೂ ತಪ್ಪದೇ ನಿರ್ವಹಿಸಿ, ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ನೊಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

 

WhatsApp Group Join Now
Telegram Group Join Now
Share This Article
error: Content is protected !!