ಕಾರವಾರ ಪಿಎಂ. ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಗುರುವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ‘Best Performing ULB-in Loan performance at State Level’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಪ್ರಶಸ್ತಿ ಪ್ರದಾನವನ್ನು ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಮಾನ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಬೆಂಗಳೂರು ರವರು ನೀಡಿದರು. ಸಮಾರಂಭದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಅಪರ ಕಾರ್ಯದರ್ಶಿ ಉಮಾ ಮಹಾದೇವನ್, ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ, ಬಿಬಿಎಂಪಿ ಬೆಂಗಳೂರುನ ವಿಶೇಷ ಆಯುಕ್ತ ವಿಕಾಸ ಕುಮಾರ್ ಸುರಾಲಕರ ಉಪಸ್ಥಿತರಿದ್ದರು
ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ನಗರಸಭೆಯ ಪೌರಾಯುಕ್ತ ಜಗದೀಶ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಿ.ಟಿ. ನಾಯ್ಕ, ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫಿಸರ್ ಸುನೀಲ ವಸಂತ ನಾಯ್ಕ ಹಾಗೂ ನಗರಸಭೆಯ ಸಿಬ್ಬಂದಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು