Ad image

ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಬಂದ ರಾಜಕೀಯ ನಾಯಕರು

Vijayanagara Vani
ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಬಂದ ರಾಜಕೀಯ ನಾಯಕರು

ಕಾಂಗ್ರೆಸ್ನಾಯಕರನ್ನ ದೇವಸ್ಥಾನದ ಆನೆಗಳು ಮತ್ತು ವಾದ್ಯಘೋಷಗಳ ಸ್ವಾಗತಿಸಲಾಯಿತು. ಪುಣ್ಯಕ್ಷೇತ್ರದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ದೇವಸ್ಥಾನದ ಮುಖ್ಯದ್ವಾರದ ಬಳಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಬರಮಾಡಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ

ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರುಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ.

ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂದು ತಿಳಿಸಿದರು.

Share This Article
error: Content is protected !!
";